HomeKarnatakaಗ್ರಾಹಕರ ಹಣ ದೋಚಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಗ್ರಾಹಕರ ಹಣ ದೋಚಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಶಿವಮೊಗ್ಗ: ದಿಢೀರ್ ಹಣ ಮಾಡುವ ದುರಾಸೆಗೆ ಒಳಗಾಗಿ ಬ್ಯಾಂಕಿನಲ್ಲಿ ಗ್ರಾಹಕರು ಇಟ್ಟಿದ್ದ ಠೇವಣಿ ಹಣ ವಂಚಿಸಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆರಗದ ಸುನಿಲ್(35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಹೇಳಲಾಗಿದೆ. ಯಡೂರಿನ ಕೆನರಾ ಬ್ಯಾಂಕ್ ನಲ್ಲಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಸುನಿಲ್ 8 ಖಾತೆಗಳಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಸುಮಾರು ಒಂದು ಕೋಟಿ ರೂಪಾಯಿಗೂ ಅಧಿಕ ಹಣ ವಂಚಿಸಿದ್ದು, 2023ರ ಡಿಸೆಂಬರ್ ನಲ್ಲಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಜೈಲಿಗೆ ಹೋಗಿ ಜಮೀನಿನ ಮೇಲೆ ಹೊರ ಬಂದಿದ್ದ. ನಂತರ ಆನ್ಲೈನ್ ವ್ಯವಹಾರದಲ್ಲಿ ಸುನಿಲ್ ಹಣ ಕಳೆದುಕೊಂಡಿದ್ದ ಎನ್ನಲಾಗಿದೆ.

ಗುರುವಾರ ವಿಷ ಸೇವಿಸಿದ್ದ ಸುನಿಲ್ ನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular