HomeJobsಬ್ಯಾಂಕ್‌, ರೈಲ್ವೆ ಉದ್ಯೋಗಗಳ ಕನಸು ನನಸಾಗಿಸಿಕೊಳ್ಳಿ! ಕರಾಮುವಿಯಿಂದ 45 ದಿನಗಳ ತರಬೇತಿ

ಬ್ಯಾಂಕ್‌, ರೈಲ್ವೆ ಉದ್ಯೋಗಗಳ ಕನಸು ನನಸಾಗಿಸಿಕೊಳ್ಳಿ! ಕರಾಮುವಿಯಿಂದ 45 ದಿನಗಳ ತರಬೇತಿ

ಧಾರವಾಡ :  ಬ್ಯಾಂಕಿಂಗ್‌, ಎಸ್‌ಎಸ್‌ಸಿ ಹಾಗೂ ರೈಲ್ವೆ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಸಿಹಿಸುದ್ದಿ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ (ಕರಾಮುವಿ) ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ವಿವಿಧ ನೇಮಕಾತಿ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ಆಯೋಜಿಸಲಾಗಿದೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ದೇಶದ ವಿವಿಧ ಬ್ಯಾಂಕಿಂಗ್, ಎಸ್‍ಎಸ್‍ಸಿ, ಹಾಗೂ ಆರ್‍ಆರ್‍ಬಿ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ಕಾಲದ ತರಬೇತಿಯನ್ನು ಆಯೋಜಿಸಲಾಗಿದೆ.

 ಆಸಕ್ತರು ಅಕ್ಟೋಬರ್ 31, 2026 ರೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಕುಲಸಚಿವ ಪ್ರೊ. ಎಂ.ಪಿ.ಸದಾಶಿವ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಶ್ರೇಷ್ಠ ರೈತ, ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

 ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆದಿಂದ ಪ್ರಸಕ್ತ ಸಾಲಿನಲ್ಲಿ ಡಿಸೆಂಬರ್ 23 ರಿಂದ 25 ರವರೆಗೆ ಬಾಗಲಕೋಟೆಯ ಉದ್ಯಾನಗಿರಿ ಆವರಣದಲ್ಲಿ ಹವಾಮಾನ ವೈಪರೀತ್ಯದಲ್ಲಿ ಸುಸ್ಥಿರ ತೋಟಗಾರಿಕೆ ಎಂಬ ಧ್ಯೇಯವಾಕ್ಯದೊಂದಿಗೆ ತೋಟಗಾರಿಕಾ ಮೇಳ ಹಮ್ಮಿಕೊಳ್ಳಲಾಗಿದೆ.

 ತೋಟಗಾರಿಕೆ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ವಿಶಿಷ್ಟ ಕೃಷಿಕರಿಗೆ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆಯ ವ್ಯಾಪ್ತಿಯಲ್ಲಿ ಬರುವ ರಾಜ್ಯದ 25 ಜಿಲ್ಲೆಗಳ ವ್ಯಾಪ್ತಿಯ ಪ್ರತಿಯೊಂದು ಜಿಲ್ಲೆಗೆ ಒಬ್ಬ ಶ್ರೇಷ್ಠ ತೋಟಗಾರಿಕೆ ರೈತ ಅಥವಾ ರೈತ ಮಹಿಳೆ ಆಯ್ಕೆ ಮಾಡಿ ಸೂಕ್ತ ಬಹುಮಾನದೊಂದಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು.

 ಆಸಕ್ತ ಧಾರವಾಡ ಜಿಲ್ಲೆಯ ರೈತ, ರೈತ ಮಹಿಳೆಯರು ಅರ್ಜಿ ನಮೂನೆಯನ್ನು ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರ, ಕುಂಬಾಪುರ ಧಾರವಾಡದಲ್ಲಿ ಪಡೆಯಬಹುದು ಅಥವಾ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧಿಕೃತ ಜಾಲತಾಣ ವೆಬ್ ಸೈಟ್: www.uhsbagalkot.karnataka.gov.in ಮೂಲಕ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಕ್ಟೋಬರ್ 30 ರೊಳಗಾಗಿ ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರ, ಕುಂಬಾಪುರ ಧಾರವಾಡದಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 18004257910 ಅಥವಾ ಡಾ. ಶಿವಯೋಗಿ ರ್ಯಾವಳದ, ವಿಸ್ತರಣಾ ಮುಂದಾಳು: 8861067360 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

 ಅಕ್ಟೋಬರ್ 23ಕ್ಕೆ ವಿಶೇಷ ಸಾಂದರ್ಭಿಕ ರಜೆ

ವಿಧಾನಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ಅ. 23 ರಂದು ನಡೆಯಲಿದ್ದು, ಅಂದು ಮತದಾರ ನೌಕರರು ಪೂರ್ವಾನುಮತಿ ಪಡೆಯುವ ಷರತ್ತಿಗೊಳಪಟ್ಟು ವಿಶೇಷ ಸಾಂದರ್ಭಿಕ ರಜೆ ಪಡೆಯಬಹುದು. ಅರ್ಹ ಪದವೀಧರ ಮತದಾರರು ಮಾತ್ರ ಮತ ಚಲಾಯಿಸಲು ಈ ಸವಲತ್ತು ಪಡೆಯಬಹುದು. ಮತಕ್ಷೇತ್ರ ವ್ಯಾಪ್ತಿಯ ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅರ್ಹ ಪದವೀಧರರಿಗೆ ಮಾತ್ರ ಇದು ಅನ್ವಯವಾಗಲಿದೆ ಎಂದು ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಕೆ.ಎಮ್.ಜಾನಕಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular