HomeJobsಬ್ಯಾಂಕ್‌, ರೈಲ್ವೆ ಉದ್ಯೋಗಾಕಾಂಕ್ಷಿಗಳೇ ಗಮನಿಸಿ! 45 ದಿನಗಳ ಉಚಿತ ಪರೀಕ್ಷಾ ತರಬೇತಿಗೆ ಅರ್ಜಿ ಆಹ್ವಾನ

ಬ್ಯಾಂಕ್‌, ರೈಲ್ವೆ ಉದ್ಯೋಗಾಕಾಂಕ್ಷಿಗಳೇ ಗಮನಿಸಿ! 45 ದಿನಗಳ ಉಚಿತ ಪರೀಕ್ಷಾ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬ್ಯಾಂಕಿಂಗ್, ಸಿಬ್ಬಂದಿ ಆಯ್ಕೆ ಆಯೋಗ (SSC) ಹಾಗೂ ರೈಲ್ವೆ ನೇಮಕಾತಿ ಮಂಡಳಿ (RRB) ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ಕರಾಮುವಿ) ಸುವರ್ಣಾವಕಾಶ ಕಲ್ಪಿಸಿದೆ.

ಈ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗಾಗಿ 45 ದಿನಗಳ ವಿಶೇಷ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಆಸಕ್ತರು ನವೆಂಬರ್ 9ರೊಳಗೆ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.

ಬ್ಯಾಂಕಿಂ ಗ್ ವಲಯದಲ್ಲಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವವರಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (ಕರಾಮುವಿ) ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು 45 ದಿನಗಳ ವಿಶೇಷ ತರಬೇತಿಯನ್ನು ಆಯೋಜಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ವಿವಿಧ ರಾಷ್ಟ್ರೀಯ ಹಾಗೂ ಖಾಸಗಿ ಬ್ಯಾಂಕ್‌ಗಳು, ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ (ಎಸ್‌ಎಸ್‌ಸಿ) ಮತ್ತು ರೈಲ್ವೆ ನೇಮಕಾತಿ ಮಂಡಳಿ (ಆರ್‌ಆರ್‌ಬಿ) ಪ್ರಕಟಿಸಿರುವ ನಾನಾ ಹುದ್ದೆಗಳ ಪರೀಕ್ಷೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ತರಬೇತಿ ನೀಡಲಾಗುತ್ತಿದೆ.

ಬ್ಯಾಂಕಿಂಗ್ ತಜ್ಞರು, ಪರೀಕ್ಷೆಗಳಲ್ಲಿ ಉತ್ತೀರ್ಣರಾದವರು, ವಿಷಯ ಪರಿಣಿತರು ಹಾಗೂ ಅಧಿಕಾರಿಗಳು ಅಭ್ಯರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ. ಈ ತರಬೇತಿಯು ರಾಜ್ಯ ಸರ್ಕಾರದ ಎಸ್‌ಡಿಎ ಹಾಗೂ ಎಫ್‌ಡಿಎ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಸಹಕಾರಿಯಾಗಲಿದೆ.ತರಬೇತಿಯಲ್ಲಿ ಪಾಲ್ಗೊಳ್ಳಲು ಆಸಕ್ತಿಯಿರುವ ಅಭ್ಯರ್ಥಿಗಳು ನವೆಂಬರ್ 9ರೊಳಗೆ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯ ಒಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ವಿವರ ಹಾಗೂ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2515944 ಅಥವಾ ಮೊಬೈಲ್ ಸಂಖ್ಯೆ 9964760090 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರಾಮುವಿ ಕುಲಸಚಿವ ಪ್ರೊ. ಎಂ.ಪಿ. ಸದಾಶಿವ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ವಿಟಿಯು ವತಿಯಿಂದ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬಳ್ಳಾರಿ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಶೈಕ್ಷಣಿಕ ಸಾಲಿನಲ್ಲಿ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ತರಬೇತಿಯನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳು [https://minority-skill-form.vercel.app/](https://minority-skill-form.vercel.app/) ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ದಿನಾಂಕ ನವೆಂಬರ್ 10 ಕೊನೆಯ ದಿನವಾಗಿರುತ್ತದೆ.ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು.

ಬಳ್ಳಾರಿ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರ, ಬಳ್ಳಾರಿ (ಮೊಬೈಲ್: 8310321101, ದೂರವಾಣಿ: 08392-200125/224)

 ಸಂಡೂರು: ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ತೋಟಗಾರಿಕೆ ಇಲಾಖೆ, ಸಂಡೂರು (ಮೊಬೈಲ್: 9036925966 / 8660575061)ಸಿರುಗುಪ್ಪ: ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ನಗರಸಭೆ ಆವರಣ, ಬಳ್ಳಾರಿ ರಸ್ತೆ, ಸಿರುಗುಪ್ಪ (ಮೊಬೈಲ್: 9148889975)

ಹೆಚ್ಚಿನ ವಿವರಗಳಿಗಾಗಿ ಇಲಾಖೆಯ 24/7 ಸಹಾಯವಾಣಿ ಸಂಖ್ಯೆ 8277799990 ಗೆ ಸಂಪರ್ಕಿಸಲು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular