HomeLatest NewsBIG NEWS: ಬನ್ನೇರುಘಟ್ಟದಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗ ಹೃದಯಾಘಾತದಿಂದ ಸಾವು

BIG NEWS: ಬನ್ನೇರುಘಟ್ಟದಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗ ಹೃದಯಾಘಾತದಿಂದ ಸಾವು

ಆನೇಕಲ್: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ನಂಜಪ್ಪ (45) ಹೃದಯಾಘಾತದಿಂದ ಸಾವನ್ನಪ್ಪಿರುವ ವ್ಯಕ್ತಿ. ಬೆಂಗಳೂರಿನ ನಾಗರಬಾವಿ ನಿವಾಸಿ. ವ್ಹೀಕೆಂಡ್ ಹಿನ್ನೆಲೆಯಲ್ಲಿ ನಂಜಪ್ಪ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಭನ್ನೇರುಘಟ್ಟ ಪಾರ್ಕ್ ಗೆ ಬಂದಿದ್ದರು. ಈ ವೇಳೆ ಸಫಾರಿಗೆ ತೆರಳಿದ್ದಾಗ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಕ್ಷಣ ಅವರನ್ನು ಝೂ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular