HomeKarnatakaBIG NEWS: ಮದ್ಯ ಮಾರಾಟಗಾರರು-ಸರ್ಕಾರದ ಸಂಧಾನ ಸಭೆ ಯಶಸ್ವಿ: ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ...

BIG NEWS: ಮದ್ಯ ಮಾರಾಟಗಾರರು-ಸರ್ಕಾರದ ಸಂಧಾನ ಸಭೆ ಯಶಸ್ವಿ: ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ: ಸಿಎಂ ಎಚ್ಚರಿಕೆ

ಬೆಂಗಳೂರು: ಮದ್ಯ ಮಾರಾಟಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಗೃಹ ಕಚೇರಿ ಕೃಷ್ಣದಲ್ಲಿ ನಡೆಸಿದ ಸಭೆ ಯಶಸ್ವಿಯಾಗಿದ್ದು, ಮದ್ಯ ಮಾರಾಟ ಸಂಘ ಮುಷ್ಕರ ನಿರ್ಧಾರದಿಂದ ಹಿಂದೆ ಸರಿದಿದೆ.

ಬಾರ್ ಅಸೋಸಿಯೇಷನ್ ವಿಭಾಗೀಯ ಅಧ್ಯಕ್ಷ ಕರುಣಾಕರ ಹೆಗಡೆ ನೇತೃತ್ವದ ನಿಯೋಗ, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿತು. ಈ ವೇಳೆ ಸಿಎಂ ಸಿದ್ದರಾಮಯ್ಯ ಮದ್ಯ ಮಾರಾಟಗಾರರ ಬೇಡಿಕೆಯನ್ನು ಸಹಾನುಭೂತಿಯಿಂದ ಪರಿಶೀಲಿಸಲಾಗುವುದು ಎಂದರು

ಮದ್ಯಮಾರಾಟಗಾರರಿಗೆ ವ್ಯಾಪಾರ ಹೆಚ್ಚಾಗಿ ಸರ್ಕಾರಕ್ಕೆ ಆದಾಯ ತರುವಂತೆ ನೋಡಿಕೊಳ್ಳಲಾಗುವುದು. ಮದ್ಯ ಮಾರಾಟಗಾರರಿಗೆ ಕಿರುಕುಳ ನೀಡದಂತೆ ಅಬಕಾರಿ ಆಯುಕ್ತರಿಗೆ ಸೂಚನೆ ನೀಡಲಾಗುವುದು ಎಂದು ಭರವಸೆ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಬಕಾರಿ ಇಲಾಖೆ ವರ್ಗಾವಣೆಗೆ ಕೌನ್ಸಿಲಿಂಗ್ ಪದ್ಧತಿ ಜಾರಿಗೆ ತರುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಮದ್ಯ ಮಾರಾಟಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ ಸಿಎಂ, ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಇದೇ ವೇಳೆ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯಪಾಲರಿಗೆ ನಾವು ದೂರು ಕೊಟ್ಟಿಲ್ಲ. ಈ ಬಗ್ಗೆ ಸುಳ್ಳು ಹಬ್ಬಿಸಿದ್ದಾರೆ. ದೂರು ಕೊಟ್ಟವರಿಗೂ ನಮಗೂ ಸಂಬಂಧವೇ ಇಲ್ಲ. ಈ ಬಗ್ಗೆ ಬೇಕಿದ್ದರೆ ಪರಿಶೀಲನೆ ನಡೆಸಿ, ತನಿಖೆ ನಡೆಸಿ ಎಂದು ಮದ್ಯ ಮಾರಾಟಗಾರರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಒಕ್ಕೋರಲಿನಿಂದ ಸ್ಪಷ್ಟಪಡಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular