HomeKarnatakaBREAKING NEWS: ಹಿರಿಯ ಸಾಹಿತಿ, ನಿರ್ದೇಶಕ ಬರಗೂರು ರಾಮಚಂದ್ರಪ್ಪ ದಿಢೀರ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

BREAKING NEWS: ಹಿರಿಯ ಸಾಹಿತಿ, ನಿರ್ದೇಶಕ ಬರಗೂರು ರಾಮಚಂದ್ರಪ್ಪ ದಿಢೀರ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ದಾವಣಗೆರೆ: ಹಿರಿಯ ಸಾಹಿತಿ, ಚಿತ್ರ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ.

ಬಂಡಾಯ ಸಾಹಿತ್ಯ ವೇದಿಕೆಯ ಕಾರ್ಯಕ್ರಮದಲ್ಲಿ ಅವರು ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರದಲ್ಲಿ ಕಾರ್ಯಕ್ರಮ ನಡೆಯುವಾಗಲೇ ಘಟನೆ ನಡೆದಿದೆ. ತಕ್ಷಣ ಅಕ್ಷಯ ಆಸ್ಪತ್ರೆಗೆ ದಾಖಲಿಸಿ ಬರಗೂರು ರಾಮಚಂದ್ರಪ್ಪನವರಿಗೆ ಚಿಕಿತ್ಸೆ ಕೊಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾಷಣದ ನಂತರ ಬರಗೂರು ರಾಮಚಂದ್ರಪ್ಪ ಅವರಿಗೆ ರಕ್ತದೊತ್ತಡ ಹೆಚ್ಚಾಗಿದೆ. ಚಿಕಿತ್ಸೆ ನಂತರ ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಆರಾಮಾಗಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ಕರೆದೊಯ್ಯಲು ನಿರ್ಧರಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular