HomeLatest NewsBIG NEWS: ಬಾರಾಮತಿಯಲ್ಲಿ ಮತ್ತೊಂದು ವಿಮಾನ ಪತನ: ಅಜಿತ್ ಪವಾರ್ ವಿಮಾನ ದುರಂತದ ಬಳಿಕ ಇನ್ನೊಂದು...

BIG NEWS: ಬಾರಾಮತಿಯಲ್ಲಿ ಮತ್ತೊಂದು ವಿಮಾನ ಪತನ: ಅಜಿತ್ ಪವಾರ್ ವಿಮಾನ ದುರಂತದ ಬಳಿಕ ಇನ್ನೊಂದು ಘಟನೆ

ಮುಂಬೈ: ಅಜಿತ್ ಪವಾರ್ ಅವರ ವಿಮಾನ ಪತನಗೊಂಡ ಘಟನೆ ಬೆನ್ನಲ್ಲೇ ಮಹಾರಾಷ್ಟ್ರದ ಪುಣೆಯಲ್ಲಿರುವ ಬಾರಾಮತಿ ವಿಮಾನ ನಿಲ್ದಾಣದ ಸಮೀಪ ಮತ್ತೊಂದು ವಿಮಾನ ಪತನಗೊಂಡಿದೆ.

ತರಬೇತಿ ವಿಮಾನವೊಂದು ಪತನಕ್ಕೀಡಾಗಿದ್ದು, ಅದೃಷ್ಟವಶಾತ್ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರೆಡ್ ಬರ್ಡ್ ಫ್ಲೈಟ್ ಟ್ರೈನಿಂಗ್ ಅಕಾಡೆಮಿಗೆ ಸೇರಿದ 2 ಸೀಟರ್ ತರಬೇತಿ ವಿಮಾನ ತಾಂತ್ರಿಕ ದೋಷದಿಂದಾಗಿ ತುರ್ತು ಲ್ಯಾಂಡಿಂಗ್ ಮಾಡುವಾಗ ಪತನಗೊಂಡಿದೆ.

ಈ ಘಟನೆಯಲ್ಲಿ ತರಬೇತಿ ನಿರತ ಪೈಲಟ್ ಅಪಾಯದಿಂದ ಪಾರಾಗಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ವಿಮಾನವು ಕಡಿಮೆ ಎತ್ತರದಲ್ಲಿ ಹಾರಾಟ ನಡೆಸಿದ್ದ ವೇಳೆ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ತುರ್ತು ಲ್ಯಾಂಡಿಂಗ್ ಮಾಡಲು ಪ್ರಯತ್ನಿಸಿದಾಗ ವಿಮಾನದ ಒಂದು ಭಾಗ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನೆಲಕ್ಕೆ ಅಪ್ಪಳಿಸಿದೆ. ’

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ವಿಮಾನ ಪತನ ಘಟನೆಯ ಕುರಿತು ತನಿಖೆ ನಡೆಯುತ್ತಿದ್ದು, ನಾಗರಿಕ ವಿಮಾನಯಾನ ಸಚಿವಾಲಯದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಬಾರಾಮತಿಯಲ್ಲಿ ಜನವರಿ 28 ರಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ವಿಮಾನ ದುರಂತದಲ್ಲಿ ಸಾವನ್ನಪಿದ್ದರು. ಲಿಯರ್‌ಜೆಟ್ 45 ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಮೃತಪಟ್ಟಿದ್ದರು. ಅದೇ ಗ್ರಾಮದ ವ್ಯಾಪ್ತಿಯಲ್ಲಿಯೇ ಇಂದು ತರಬೇತಿ ವಿಮಾನ ಪತಗೊಂಡಿದೆ. ಗೌಜುಬಾವಿ ಗ್ರಾಮದಲ್ಲಿ ಬೆಳಿಗ್ಗೆ 8:50ರ ಸುಮಾರಿಗೆ ವಿಮಾನ ಪತನಗೊಂಡಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular