
ಶ್ರೀನಿವಾಸಪುರ ತಾಲೂಕಿನ ಕಾಂಗ್ರೆಸ್ ಮುಖಂಡ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತನ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್ ಮುಖಂಡ ಎಂ.ಶ್ರೀನಿವಾಸ್ ಮೇಲೆ ಹಲ್ಲೆ ನಡೆದಿದ್ದು, 6 ಜನ ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದರು.
ಮಾರಣಾಂತಿಕವಾಗಿ ಹಲ್ಲೆಗೊಳಗಾದ ಶ್ರೀನಿವಾಸ್ ಅವರನ್ನು ಕೋಲಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹಾಡಹಗಲೇ ನಡೆದ ಕೊಲೆಗೆ ಜನರು ಬೆಚ್ಚಿ ಬಿದ್ದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

