
ಕೊಲೆಯಾದವರನ್ನು ಗೌಡಪ್ಪಗೌಡ ಪಾಟೀಲ್( 50) ಎಂದು ಗುರುತಿಸಲಾಗಿದೆ. ಹಳೇ ವೈಷಮ್ಯ ಹಿನ್ನೆಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳ ಸಮೇತ ಬಂದು ಗೌಡಪ್ಪಗೌಡನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಭೀಕರ ಹತ್ಯೆಗೆ ಜನರು ಬೆಚ್ಚಿ ಬಿದ್ದಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಂದರ್ಭಿಕ ಚಿತ್ರ

