HomeLatest NewsBIG NEWS: ಪೊಲೀಸರೇ ಡ್ರಗ್ ಟ್ರಾಫಿಕಿಂಗ್‌ನಲ್ಲಿ ಶಾಮೀಲಾಗಿರುವ ಶಂಕೆ: ಸಿಎಂ ಎಚ್ಚೆತ್ತುಕೊಳ್ಳದಿದ್ದರೆ ಉಡ್ತಾ ಕರ್ನಾಟಕ ಆಗಲಿದೆ:...

BIG NEWS: ಪೊಲೀಸರೇ ಡ್ರಗ್ ಟ್ರಾಫಿಕಿಂಗ್‌ನಲ್ಲಿ ಶಾಮೀಲಾಗಿರುವ ಶಂಕೆ: ಸಿಎಂ ಎಚ್ಚೆತ್ತುಕೊಳ್ಳದಿದ್ದರೆ ಉಡ್ತಾ ಕರ್ನಾಟಕ ಆಗಲಿದೆ: ಸಂಸದ ಬೊಮ್ಮಾಯಿ ಆಕ್ರೋಶ

ಗದಗ: ಮಹಾರಾಷ್ಟ್ರ ಪೊಲೀಸರು ಕರ್ನಾಟಕಕ್ಕೆ ಬಂದು ಡ್ರಗ್ ಟ್ರಾಫಿಕಿಂಗ್ ಮಾಡುವವರನ್ನು ಪತ್ತೆ ಹೆಚ್ಚುತ್ತಾರೆ ಎಂದರೆ ಇಲ್ಲಿನ ಪೊಲೀಸರು ಡ್ರಗ್ ಟ್ರಾಫಿಕಿಂಗ್‌ನಲ್ಲಿ ಶಾಮೀಲಾಗಿದ್ದಾರೆ ಎಂಬ ಅನುಮಾನ ಮೂಡುತ್ತದೆ. ಸಿಎಂ ಸಿದ್ದರಾಮಯ್ಯ ಎಚ್ಚೆತ್ತುಕೊಳ್ಳದಿದ್ದರೆ ಉಡ್ತಾ ಕರ್ನಾಟಕ ಆಗಲಿದೆ ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಭಿಪ್ರಾಯ ಪಟ್ಟರು.

ಗದಗನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬೊಮ್ಮಾಯಿ, ಡಗ್ಸ್ ಬಳಕೆ ಕರ್ನಾಟಕದಲ್ಲಿ ಅತಿ ಹೆಚ್ಚಿದೆ. ಅದನ್ನು ನಿಯಂತ್ರಿಸಲು ಸರ್ಕಾರ ಸ್ಪೆಷಲ್ ಸ್ಮಾಡ್ ಮಾಡಿದ್ದಾರೆ. ಆದರೆ, ಪೊಲೀಸರ ಭಯ ಇಲ್ಲ. ಹಲವು ಪ್ರಕರಣಗಳಲ್ಲಿ ಪೊಲೀಸರು ಕೆಲವರನ್ನು ಬಂಧಿಸಿದ್ದಾರೆ. ಇದಕ್ಕಾಗಿ ವಿಶೇಷ ಕಾನೂನಿದೆ. ಅದನ್ನು ಬಳಕೆ ಮಾಡುತ್ತಿಲ್ಲ. ಮಹಾರಾಷ್ಟ್ರದವರು ಬಂದು ಇಲ್ಲಿ ಡಗ್ಸ್ ಪತ್ತೆ ಹೆಚ್ಚುತ್ತಾರೆ ಎಂದರೆ ಇಲ್ಲಿನ ಪೊಲೀಸರು ಡ್ರಗ್ ಟ್ರಾಫಿಕಿಂಗ್‌ನಲ್ಲಿ ಶಾಮೀಲಾಗಿದ್ದಾರೆ ಎಂಬ ಅನುಮಾನ ಮೂಡುತ್ತದೆ. ಹಾವೇರಿ ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲೂ ಡ್ರಗ್ಸ್ ಮುಕ್ತವಾಗಿ ಮಾರಾಟವಾಗುತ್ತಿದೆ. ಇದೇ ರೀತಿ ಮುಂದುವರೆದರೆ ಪಂಜಾಬ್ ಆದ ಹಾಗೆ ನಮ್ಮ ರಾಜ್ಯ ಕೂಡ ಆಗುತ್ತದೆ. ಉಡ್ತಾ ಪಂಜಾಬ್ ಥರಾ ಉಡ್ತಾ ಕರ್ನಾಟಕ ಆಗುತ್ತದೆ ಎಂದು ಹೇಳಿದರು.

ಯಾವ ಅಧಿಕಾರಿಗಳ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟ ನಡೆಯುತ್ತಿದೆ ಆ ಎಲ್ಲ ಅಧಿಕಾರಿಗಳನ್ನು ಬದಲಾಯಿಸಬೇಕು. ಮುಖ್ಯವಂತಿಗಳು ಎಚ್ಚೆತ್ತುಕೊಳ್ಳಬೇಕು. ಡ್ರಗ್ ಟ್ರಾಫಿಕಿಂಗ್ ಮಾಡುವವರನ್ನು ಒದ್ದು ಒಳಗೆ ಹಾಕಬೇಕು. ಡ್ರಗ್ ಟ್ರಾಫಿಕಿಂಗ್ ಮಾಡುವರಿಗೆ ಕಠಿಣ ಕಾನೂನು ತರಬೇಕು. ರಾಜ್ಯ ಸರ್ಕಾರ ದ್ವೇಷ ಭಾಷಣ ಮಾಡುವುದರ ವಿರುದ್ಧ ಕಾನೂನು ತರುವ ಬದಲು, ರೈತರ ಗೊಬ್ಬರ ಕಳ್ಳತನ ಮಡುವವರಿಗೆ ಕಠಿಣ ಕಾನೂನಿನಲ್ಲ, ಡ್ರಗ್ ಮಾರುವವರಿಗೂ ಬಿಗಿ ಕಾನೂನಿಲ್ಲ. ಕಳ್ಳಭಟ್ಟಿ ಮಾಡುವವರಿಗೂ ಬಿಗಿ ಕಾನೂನಿಲ್ಲ ಈ ರಾಜ್ಯ ಸಂಪೂರ್ಣ ಕಾನೂನು ಸುವ್ಯವಸ್ಥೆ ಅಲ್ಲದೇ ಅನೈತಿಕ ಚಟುವಟಿಯಿಕೆಯಿಂದ ಕೂಡಿದ ರಾಜ್ಯವಾಗಿದೆ. ಈ ಸರ್ಕಾರ ಸಂಪೂರ್ಣ ಕಚ್ಚಾಟದಲ್ಲಿ ಮುಳುಗಿದೆ. ಹೀಗಾಗಿ ಡ್ರಗ್ ಮಾಫಿಯಾ ಮುಕ್ತವಾಗಿದೆ. ಇದು ಡ್ರಗ್ ಮಾಫಿಯಾ ನಿಯಂತ್ರಣದಲ್ಲಿರುವ ಸರ್ಕಾರವಾಗಿದೆ ಎಂದು ಕಿಡಿಕಾರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular