BIG NEWS: ಬಿಜೆಪಿ ಶಾಸಕ ಯತ್ನಾಳ್ ಗೆ ಬಿಗ್ ಶಾಕ್; ಸಕ್ಕರೆ ಕಾರ್ಖಾನೆ ಮುಚ್ಚುವಂತೆ ಆದೇಶ

ಕಲಬುರ್ಗಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ಮುಚ್ಚಲು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ.

ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಸಿದ್ಧ ಶ್ರೀ ಸಕ್ಕರೆ ಕಾರ್ಖಾನೆಯ ಕಲುಷಿತ ನೀರು ಮುಲ್ಲಾಮಾರಿ ಜಲಾಶಯಕ್ಕೆ ಬಿಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ವಾಯು, ಜಲ ಕಾಯ್ದೆ ಉಲ್ಲಂಘನೆ ಆರೋಪ ಹಿನ್ನೆಲೆಯಲ್ಲಿ ಫ್ಯಾಕ್ಟರಿಗೆ ಬೀಗ ಜಡಿಯುವಂತೆ ಹಾಗೂ ಫ್ಯಾಕ್ಟರಿಗೆ ಲಭ್ಯವಿರುವ ನೀರಿನ ಸಂಪರ್ಕ, ವಿದ್ಯುತ್ ಕಡಿತಗೊಳಿಸುವಂತೆ ಮಂಡಳಿ ಆದೇಶ ನೀಡಿದೆ.

ಹುಮ್ನಾಬಾದ್ ನ ಪ್ರಸನ್ನ ಪ್ರಿ ಪ್ರೊಸೆಸಿಂಗ್ ಪ್ರೈವೆಟ್ ಲಿಮಿಟೆಡ್ ನಲ್ಲಿ ಇತ್ತೀಚೆಗೆ ವಿಷಾನೀಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಬಲಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಹುಮ್ನಾಬಾದ್ ಕಾರ್ಖಾನೆಯನ್ನು ಹಾಗೂ ಯತ್ನಾಳ್ ಒಡೆತನದ ಚಿಂಚೋಳಿಯ ಸಿದ್ದಶ್ರೀ ಸೌಹಾರ್ದ ಸಹಕಾರಿ ಸಕ್ಕರೆ ಕಾರ್ಖಾನೆಗಳನ್ನು ತಕ್ಷಣ ಮುಚ್ಚುವಂತೆ ಆದೇಶ ನೀಡಲಾಗಿದೆ.

ಈ ಬಗ್ಗೆ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿಯೂ ಕಾರ್ಖಾನೆ ಮುಚ್ಚಲು ಅನುಮೋದನೆ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read