HomeKarnatakaವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಬಸನಗೌಡ ದದ್ದಲ್ ರಾಜೀನಾಮೆ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಬಸನಗೌಡ ದದ್ದಲ್ ರಾಜೀನಾಮೆ

ರಾಯಚೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಬಸನಗೌಡ ದದ್ದಲ್‌ ರಾಜೀನಾಮೆ ನೀಡಿದ್ದಾರೆ.

ಸಚಿವ ಸಂಪುಟದಲ್ಲಿ ರಾಯಚೂರು, ಯಾದಗಿರಿ ಜಿಲ್ಲೆಗಳಿಗೆ ಪ್ರಾತಿನಿಧ್ಯ ಸಿಗದ ಹಿನ್ನೆಲೆಯಲ್ಲಿ ಬೇಸರಗೊಂಡು ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾಅರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿಂದುಳಿದ ಜಿಲ್ಲೆಗಳಾದ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಸಚಿವ ಸ್ಥಾನ ಸಿಗದಿರುವುದು ಬೇಸರ ತಂದಿದೆ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ನೀತಿ ಆಯೋಗ ಗುರುತಿಸಿರುವ ಮಹತ್ವಾಕಾಂಕ್ಷಿ ಜಿಲ್ಲೆಗಳ ಪಟ್ಟಿಯಲ್ಲಿ ರಾಯಚೂರು ಇದ್ದರೂ, ಸಚಿವ ಸಂಪುಟದಲ್ಲಿ ಜಿಲ್ಲೆಗೆ ಅವಕಾಶ ಸಿಗದಿರುವುದರಿಂದ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular