HomeKarnatakaBIG NEWS: ಉಚಿತ, ಖಚಿತ ಎಂದವರು ಮನೆಗೆ ಹೋಗುವುದು ನಿಶ್ಚಿತ : ಕಾಂಗ್ರೆಸ್ ವಿರುದ್ಧ ಯತ್ನಾಳ್...

BIG NEWS: ಉಚಿತ, ಖಚಿತ ಎಂದವರು ಮನೆಗೆ ಹೋಗುವುದು ನಿಶ್ಚಿತ : ಕಾಂಗ್ರೆಸ್ ವಿರುದ್ಧ ಯತ್ನಾಳ್ ವಾಗ್ದಾಳಿ

ಬೆಂಗಳೂರು: ಉಚಿತ, ಖಚಿತ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದವರು ಮನೆಗೆ ಹೋಗುವುದು ನಿಶ್ಚಿತ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕರು, ಕಾಂಗ್ರೆಸ್ ಎಲ್ಲರಿಗೂ ದೋಖಾ ಮಾಡಿದ ದೋಖಾ ಕಂಪನಿ. ಅಧಿಕಾರಕ್ಕೆ ಬರುವ ಮೊದಲು ಎಲ್ಲರಿಗೂ ಉಚಿತ ಯೋಜನೆ ಎಂದು ಘೋಷಿಸಿಸಿ ಅಧಿಕಾರಕ್ಕೆ ಬಂದ ಮೇಲೆ ಜನರಿಗೆ ಮೋಸ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ನಿಂದ ಮಕ್ಮಲ್ ಟೋಪಿ ಎಂತಾ ಜನರಿಗೆ ಗೊತ್ತಾಗಿದೆ. ಲೋಕಸಭೆ ಚುನಾವಣೆವರೆಗೆ ಮಾತ್ರ ಈ ಗ್ಯಾರಂಟಿಗಳು ಇರುತ್ತವೆ. ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಹಣವಿರಲ್ಲ. ಮುಂದೆ ಕರ್ನಾಟಕದಲ್ಲಿಯೂ ಪಾಕಿಸ್ತಾನ, ಶ್ರೀಲಂಕಾ ರೀತಿ ಸ್ಥಿತಿ ನಿರ್ಮಾಣವಾಗುತ್ತೆ ಎಂದು ಕಿಡಿಕಾರಿದ್ದಾರೆ.

ಇದೇ ವೇಳೆ ಸಿದ್ದರಾಮಯ್ಯ ಕುರ್ಚಿ ಖಾಲಿ ಮಾಡಲ್ಲ, ಡಿ.ಕೆ.ಶಿವಕುಮಾರ್ ಸಿಎಂ ಆಗಲ್ಲ. ಡಿಸೆಂಬರ್ ಗೆ ರಾಜ್ಯದಲ್ಲಿ ಕೈ ಸರ್ಕಾರದ ವಾರಂಟಿ ಅಂತ್ಯವಾಗುತ್ತೆ ಎಂದು ಭವಿಷ್ಯ ನುಡಿದರು.

 

For Latest News Updates, Join Our Whatsapp Community🚩
RELATED ARTICLES

Most Popular