HomeKarnatakaಕಾಂಗ್ರೆಸ್ ಪಕ್ಷದ ನೈಜ ಮನಃಸ್ಥಿತಿ ಬಗ್ಗೆ ಇದಕ್ಕಿಂತ ಉತ್ತಮ ಉದಾಹರಣೆ ಬೇಕಿಲ್ಲ; ಯತ್ನಾಳ್ ವಾಗ್ದಾಳಿ

ಕಾಂಗ್ರೆಸ್ ಪಕ್ಷದ ನೈಜ ಮನಃಸ್ಥಿತಿ ಬಗ್ಗೆ ಇದಕ್ಕಿಂತ ಉತ್ತಮ ಉದಾಹರಣೆ ಬೇಕಿಲ್ಲ; ಯತ್ನಾಳ್ ವಾಗ್ದಾಳಿ

ವಿಜಯಪುರ: ಜನವರಿ 22ರಂದು ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಗೈರಾಗಲು ಕಾಂಗ್ರೆಸ್ ನಾಯಕರು ನಿರ್ಧರಿಸಿರುವ ವಿಚಾರವಾಗಿ ಕಿಡಿಕಾರಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕಾಂಗ್ರೆಸ್ ನದ್ದು ಹಿಂದೂ ವಿರೋಧಿ ನಿಲುವು ಎಂಬುದಕ್ಕೆ ಇದಕ್ಕಿಂತ ಉದಾಹರಣೆ ಬೇಕಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಪಕ್ಷದ ನೈಜ ಮನಃಸ್ಥಿತಿ, ಹಿಂದೂ ವಿರೋಧಿ ನಿಲುವು ಏನೆಂದು ತಿಳಿಯುವುದಕ್ಕೆ ಇದಕ್ಕಿಂತ ಉತ್ತಮ ಉದಾಹರಣೆ ಬೇಕೇಲ್ಲ. ಇಡೀ ದೇಶದಲ್ಲೇ ಹಬ್ಬದ ವಾತಾವರಣವಿರಬೇಕಾದರೆ, ಕ್ಷುಲ್ಲಕ ರಾಜಕಾರಣಕ್ಕೆ ಇವರು ಶ್ರೀರಾಮ ದೇವರ ಪ್ರಾಣ ಪ್ರತಿಷ್ಠಾಪನೆಯ ಆಮಂತ್ರಣವನ್ನು ತಿರಸ್ಕರಿಸುವುದು ಇವರ ಡೋಂಗಿ ಜಾತ್ಯಾತೀತವಾದಕ್ಕೆ ಹಿಡಿದ ಕೈಗನ್ನಡಿ ಎಂದು ಗುಡುಗಿದ್ದಾರೆ.

ಇದೇ ವೇಳೆ ಶ್ರೀರಾಮ ಇವರಿಗೆ ಒಳ್ಳೆಯ ಬುದ್ಧಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular