BIG NEWS: ಜನವರಿಯಲ್ಲಿ ಕಾಂಗ್ರೆಸ್ ಸರ್ಕಾರ ಪತನ, ಅದಕ್ಕೆ ವಿಪಕ್ಷ ನಾಯಕನ ಆಯ್ಕೆ ಮಾಡಿಲ್ಲ ಎಂದ ಶಾಸಕ ಯತ್ನಾಳ್

ಹುಬ್ಬಳ್ಳಿ: ಜನವರಿಯಲ್ಲಿ ಕಾಂಗ್ರೆಸ್ ಸರ್ಕಾರ ಪತನ ಖಚಿತ ಎಂದು ಭವಿಷ್ಯ ನುಡಿದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅದಕ್ಕೆ ನಾವಿನ್ನೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಶಾಸಕ ಯತ್ನಾಳ್, ಕಾಂಗ್ರೆಸ್ ಸರ್ಕಾರ ಜನವರಿಯಲ್ಲಿ ಪತನವಾಗಲಿದೆ. ಹಾಗಾಗಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಇದೇ ಕಾರಣಕ್ಕೆ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿಲ್ಲ ಎಂದು ಹೇಳಿದ್ದಾರೆ.

ಅವರ ಪಕ್ಷದವರೇ ಅವರ ಸರ್ಕಾರವನ್ನು ಬೀಳಿಸಲಿದ್ದಾರೆ. ಹಾಗಾಗಿ ನಾವೇ ನೇರವಾಗಿ ಸಿಎ ಆಗಬಹುದು ಎಂಬ ಕಾರಣಕ್ಕೆ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿಲ್ಲ. ನೇರವಾಗಿ ನಮ್ಮ ಪಕ್ಷದವರೇ ಯಾಕೆ ಸಿಎಂ ಆಗಬಾರದು ಎಂದು ಪ್ರಶ್ನಿಸಿದರು.

ಬಿ.ಕೆ.ಹರಿಪ್ರಸಾದ್ ಯಾರ ಕುಮ್ಮಕ್ಕಿನಿಂದ ಮಾತನಾಡುತ್ತಿದ್ದಾರೆ…ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಈ ತಂತ್ರ ಅನುಸರಿಸಿದ್ದಾರೆ. ವೇಟಿಂಗ್ ಸಿಎಂ ಕುಮ್ಮಕ್ಕಿನಿಂದ ಹರಿಪ್ರಸಾದ್ ಅಸಮಾಧಾನ ಹೊರಹಾಕಿದ್ದಾರೆ. ಹರಿಪ್ರಸಾದ್ ಅವರನ್ನು ಕೇವಲ ಅಸ್ತ್ರವಾಗಿ ಬಳಸಿಕೊಳ್ಳಲಾಗುತ್ತಿದೆ. ಇದೆಲ್ಲವನ್ನು ಗಮನಿಸಿದರೆ ಜನವರಿಯಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುವುದು ಖಚಿತ ಎಂದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read