ವಿಜಯಪುರ: ತನ್ನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಹೋರಿಸಿರುವ ಬೆಂಗಳೂರು ಮೂಲದ ಮಹಿಳೆ ಸೇರಿ ನಾಲ್ವರ ವಿರುದ್ಧ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿಜಯಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಹಿಳೆ ಸೇರಿ ನಾಲ್ವರು ನನ್ನ ಬಳಿ 3 ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಕೊಡದಿದ್ದರೆ ಮಾಧ್ಯಮಗಳ ಮುಂದೆ ಹೋಗುವುದಾಗಿ, ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟದಾಗಿ ಅಪಪ್ರಚರ ಮಾಡುತ್ತೇವೆ. ಅತ್ಯಾಚಾರ ದೂರು ದಾಖಲಿಸುವುದಾಗಿ ಬೆದರಿಕೆ ಹಾಕಿ ತೇಜೋವಧೆ ಮಾಡುತ್ತಿದ್ದಾರೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬೆಂಗಳೂರು ಮೂಲದ ಮಹಿಳೆಯೊಬ್ಬರು 2-3 ವರ್ಷಗಳ ಹಿಂದೆ ತನ್ನ ಸಹೋದರನೊಂದಿಗೆ ನನ್ನನ್ನು ಭೇಟಿಯಾಗಿದ್ದರು. ನಾನು ಲಿಂಗಾಯಿತ ಸಮಾಜದವಳಾಗಿದ್ದು, ಪಂಚಮಸಾಲಿ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದರು. ತಾನು ಒಂದು ಫೌಂಡೇಷನ್ ಮೂಲಕ ಬಡ ಹಾಗೂ ಅನಾಥ ಮಕ್ಕಳನ್ನು ಸಾಕುತ್ತಿದ್ದೇನೆ. ಹಣ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಬಳಿಕ ಯಾರಾದರೂ ದಾನಿಗಳಿದ್ದರೆ ಸಹಾಯ ಮಾಡಿಸುವುದಾಗಿ ಹೇಳಿದ್ದೆ.
ನಾನು ಹಣ ನೀಡದ ಕಾರಣಕ್ಕೆ ರಾಜಕೀಯ ವ್ಯಕ್ತಿಗಳ ಪಿತೂರಿಯಿಂದ ನನ್ನ ತೇಜೋವಧೆ ಮಾಡಲು ಹಣಕ್ಕಾಗಿ ಪೀಡಿಸುತ್ತಿದ್ದರು. ಆದರೂ ನಾನು ಹಣ ನೀಡಿಲ್ಲ ಎಂದು ನನ್ನ ವಿರುದ್ಧ ಇಲ್ಲ ಸಲದ ಆರೋಪ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಫೆ.11ರಂದು ವಿಜಯಪುರದ ಕಗ್ಗೋಡದಿಂದ ನಾನು ಬರುತ್ತಿದ್ದಾಗ ವಾಹನ ಅಡ್ಡಗಟ್ಟಿ ಹಣಕ್ಕಾಗಿ ಬೆದರಿಕೆ ಹಾಕಿದ್ದರು. ಹಣ ನೀಡದ ಕಾರಣ ನನ್ನ ಕಾರಿನ ಗಾಜುಗಳಿಗೆ ಗುದ್ದು ಹಲ್ಲೆ ನಡೆಸಿದ್ದಾರೆ. ಈ ವೇಳೆ ಬೆಂಗಾವಲು ಸಿಬ್ಬಂದಿ ವಾತಾವರಣ ತಿಳಿಗೊಳಿಸಿದ್ದರು. ಅದಾದ ಬಳಿಕ ನನ್ನ ವಿರುದ್ಧ ಅಪಪ್ರಚಾರ ಮಾಡಲಾರಂಭಿಸಿದ್ದರು. ಖಾಸಗಿ ವಾಹಿನಿಯಲ್ಲಿ ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ದೂರುದ್ದಾರೆ.
ಇದೆಕ್ಕೆಲ್ಲ ಕಾರಣರಾದ ಮಹಿಳೆ ಸೇರಿದಂತೆ ಪೃಥ್ವಿಗೌಡ, ಯಶವಂತ್, ಎಂ.ಡಿ.ವೀರೇಶ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರಕರಣ ದಾಖಲಿಸಿದ್ದಾರೆ.

