BREAKING: ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ

ಬಾಗಲಕೋಟೆ: ಮಹತ್ವದ ಬೆಳವಣಿಗೆಯೊಂದರಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠಾದ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಉಚ್ಚಾಟನೆ ಮಾಡಲಾಗಿದೆ.

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಆಗ್ರಹಿಸಿ ಹೋರಾಟದ ಮೂಲಕ ಗುರುತಿಸಿಕೊಂಡಿದ್ದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡಲಾಗಿದೆ.

ಕೂಡಲಸಂಗಮ ಪಂಚಮಸಾಲಿ ಪೀಠದಲ್ಲಿ, ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್, ಕಾರ್ಯದರ್ಶಿ ನೀಲಕಂಠ ಅಸೂಟಿ ಸೇರಿದಂತೆ ಹಲವು ಮುಖಂಡರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸ್ವಾಮೀಜಿಗಳು ದಾವಣಗೆರೆ, ಬೆಳಗಾವಿ ಸೇರಿದಂತೆ ಹಲವೆಡೆ ಆಸ್ತಿಗಳನ್ನು ಮಾಡಿದ್ದಾರೆ. ಟ್ರಸ್ಟ್ ಸದಸ್ಯರ ಮಾತು ಕೇಳುವುದಿಲ್ಲ ಸೇರಿದಂತೆ ಹಲವು ಕಾರಣಗಳನ್ನು ನೀಡಿ ಅವರನ್ನು ಉಚ್ಛಾಟನೆ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read