HomeLatest Newsಕುರುಬ ಸಮುದಾಯ ಎಸ್ಟಿಗೆ ಸೇರಿಸಲು ಸಿದ್ದರಾಮಯ್ಯ ಅವರ ಅವಧಿಯಲ್ಲಿಯೇ ಕೇಂದ್ರಕ್ಕೆ ಶಿಫಾರಸ್ಸು: ಸಂಸದ ಬೊಮ್ಮಾಯಿ

ಕುರುಬ ಸಮುದಾಯ ಎಸ್ಟಿಗೆ ಸೇರಿಸಲು ಸಿದ್ದರಾಮಯ್ಯ ಅವರ ಅವಧಿಯಲ್ಲಿಯೇ ಕೇಂದ್ರಕ್ಕೆ ಶಿಫಾರಸ್ಸು: ಸಂಸದ ಬೊಮ್ಮಾಯಿ

ಬೆಂಗಳೂರು: ಕುರುಬ ಸಮುದಾಯವನ್ನು ಎಸ್ಟಿ ಸಮುದಾಯಕ್ಕೆ ಸೇರಿಸಲು ಸಿದ್ದರಾಮಯ್ಯ ಅವರ ಹಿಂದಿನ ಸರ್ಕಾರದ ಅವಧಿಯಲ್ಲಿ ಕೇಂದ್ರಕ್ಕೆ ಪ್ರಸ್ತಾಪ ಹೋಗಿತ್ತು. ನಮ್ಮ ಅವಧಿಯಲ್ಲಿ ಕುಲಶಾಸ್ತ್ರಿಯ ಅಧ್ಯಯನ ವರದಿ ಬಂದಿತ್ತು. ಈಗಿನ ಕಾಂಗ್ರೆಸ್ ಸರ್ಕಾರ ಅದನ್ನು ಪರಿಶೀಲನೆ ಮಾಡಿ 2023 ರ ಜುಲೈ 20 ರಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬೊಮ್ಮಾಯಿ, ಕುರುಬ ಸಮುದಾಯವನ್ನು ಎಸ್ಟಿ ಸಮುದಾಯಕ್ಕೆ ಸೇರಿಸಲು ಸಿದ್ದರಾಮಯ್ಯ ಅವರ ಹಿಂದಿನ ಸರ್ಕಾರದ ಅವಧಿಯಲ್ಲಿ ಕೇಂದ್ರಕ್ಕೆ ಪ್ರಸ್ತಾಪ ಹೋಗಿತ್ತು. ಕುಲ ಶಾಸ್ತ್ರೀಯ ಅಧ್ಯಯನ ಮಾಡಿಸುವಂತೆ ವಾಪಸ್ ಬಂದಿತ್ತು. ಸಮ್ಮಿಶ್ರ ಸರ್ಕಾರ ಕುಲಶಾಸ್ತ್ರೀಯ ಅಧ್ಯಯನ ನಡೆಸಲು ಆದೇಶ ಮಾಡಿತ್ತು. ನಮ್ಮ ಅವಧಿಯಲ್ಲಿ ಕುಲಶಾಸ್ತ್ರಿಯ ಅಧ್ಯಯನ ವರದಿ ಬಂದಿತ್ತು. ಅದನ್ನು ನಮ್ಮ ಸರ್ಕಾರ ಒಪ್ಪಿತ್ತು. ಚುನಾವಣೆ ಬಂದು ನಮ್ಮ ಸರ್ಕಾರ ಹೋಯಿತು. ಈಗಿನ ಕಾಂಗ್ರೆಸ್ ಸರ್ಕಾರ ಅದನ್ನು ಪರಿಶೀಲನೆ ಮಾಡಿ 2023 ರ ಜುಲೈ 20 ರಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಸರ್ಕಾರ ದಾಖಲೆಗಳನ್ನು ತೆಗೆದು ನೋಡಲಿ. ಈಗ ಸಿದ್ದರಾಮಯ್ಯ ಅವರ ಕೈಯಲ್ಲಿ ಇದೆ ಅವರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೆ ನೋಡಬೇಕು. ವಾಲ್ಮೀಕಿ ಸಮುದಾಯ ಮತ್ತು ಕುರುಬರ ನಡುವೆ ಏನೂ ಸಮಸ್ಯೇ ಆಗುವುದಿಲ್ಲ. ಅಹಿಂದ ನಾಯಕ ಸಿದ್ದರಾಮಯ್ಯ ಅವರೇ ಇದ್ದಾರೆ‌. ಮೀಸಲಾತಿ ಹೆಚ್ಚಳ ಮಾಡುವುದು ಅಷ್ಟು ಸುಲಭವಿಲ್ಲ ಎಂದರು.

ಇನ್ನು ಬಿಗ್ ಬಾಸ್ ವಿಚಾರ ಆ ಸ್ಟುಡಿಯೊ ಮಾಲಕರು ಮತ್ತು ಅಧಿಕಾರಿಗಳ ನಡುವೆ ನಡೆಯುವುದು ಯಾವ ಕಾನೂನಿನ ಅಡಿಯಲ್ಲಿ ಯಾವ ಕ್ರಮ ಕೈಗೊಳ್ಳಬೇಕು ಎನ್ನುವುದಕ್ಕೂ ಕಾನೂನು ಪ್ರಕಾರ ನಡೆಯುವ ಪದ್ದತಿ ಇದೆ. ಈ ಮಧ್ಯೆ ಅದಕ್ಕೆ ಡಿಸಿಎಂ ಅವರು ಹಿಂದೆ ಆಡಿದ ಮಾತು ಸೇರಿಸಿ ಕೆಲವರು ಹೇಳುತ್ತಿದ್ದಾರೆ. ಅದು ಮುಖ್ಯವಲ್ಲ. ಎಲ್ಲೊ ದಾರಿ ತಪ್ಪುತ್ತಿದೆ ಎನಿಸುತ್ತಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರ ವ್ಯಾಪ್ತಿ ಏನು? ಬಂದ್ ಮಾಡುವ ಅಧಿಕಾರ ಇದೆಯಾ? ಇಲ್ಲವಾ ನೋಡಬೇಕು. ಒಂದು ಕಡೆ ಮನರಂಜನಾ ಉದ್ಯಮ ನಡೆಯಬೇಕು ಇನ್ನೊಂದೆಡೆ ಮಾಲಿನ್ಯವಾಗದಂತೆ ನೊಡಿಕೊಳ್ಳಬೇಕಿದೆ. ಎಷ್ಟು ದಿನದಿಂದ ಈ ಸಮಸ್ಯೆ ಇದೆ. ಈಗ್ಯಾಕೆ ಈ ಕ್ರಮ ಕೈಗೊಂಡಿದ್ದಾರೆ? ಎನ್ನುವ ಪ್ರಶ್ನೆ ಮೂಡುತ್ತದೆ. ಇಕೊ ಎಕನಾಮಿಕ್ಸ್ ಅಂತಾರೆ‌, ಆರ್ಥಿಕತೆಯೂ ನಡೆಯಬೇಕು, ಪರಿಸರವೂ ಉಳಿಯಬೇಕು. ಅದು ಈ ರಾಜ್ಯದಲ್ಲಿ ತಪ್ಪಿ ಹೋಗಿದೆ. ರಾಜ್ಯದಲ್ಲಿ ಎಲ್ಲವೂ ದಾರಿ ತಪ್ಪಿದೆ. ನಡೆದದ್ದೇ ದಾರಿ ಎನ್ನುವಂತಾಗಿದೆ. ಹಾಗೆ ಆದಾಗಲೇ ಈ ರೀತಿಯ ಘಟನೆಗಳು ನಡೆಯುತ್ತವೆ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಿಗ್ ಬಾಸ್ ಕಾರ್ಯಕ್ರಮಕ್ಕೆ ಅನುಮತಿ ಕೊಡೆಸಿ ಇದರಲ್ಲಿ ತಮ್ಮ ಪಾತ್ರ ಇಲ್ಲ ಎನ್ನುವುದನ್ನು ಸಾಬೀತು ಪಡಿಸುವ ಪ್ರಯತ್ನ ಮಾಡಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular