BIG NEWS: ಯಡಿಯೂರಪ್ಪ ನಾಯಕತ್ವದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ: ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಒಂದಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ‌ ತರುವ ಕೆಲಸ‌ ಮಾಡುತ್ತೇವೆ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಯುಡಿಯೂರಪ್ಪ ಅವರ 83 ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಡಾಲರ್ಸ್ ಕಾಲೋನಿಯ ಅವರ ನಿವಾಸಕ್ಕೆ ಭೇಟಿ ನೀಡಿದ ಬಿಜೆಪಿ ನಾಯಕರು, ಯಡಿಯೂರಪ್ಪನವರಿಗೆ ಶುಭಾಷಯ ತಿಳಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ್ ಬೊಮ್ಮಾಯಿ, ರಾಜ್ಯದಲ್ಲಿ ಯಡಿಯೂರಪ್ಪ ಜನಮೆಚ್ಚುಗೆ ಪಡೆದ ನಾಯಕ. ಹಲವು ಹೋರಾಟಗಳ ಮೂಲಕ ಅಧಿಕಾರಕ್ಕೆ ಬಂದಿದ್ದರು. ಅಧಿಕಾರಕ್ಕೆ ಬಂದ ಮೇಲೆ‌ ಎಲ್ಲ ಸಮುದಾಯಗಳಿಗೂ ‌ಕಾರ್ಯಕ್ರಮ ಕೊಟ್ಟರು. ಜನ ಯಡಿಯೂರಪ್ಪ ಅವರ ಕಾರ್ಯಕ್ರಮಗಳನ್ನು ನೆನಪಿನಲ್ಲಿಟ್ಟುಕೊಂಡಿದ್ದಾರೆ. ಅಂತಹ ಕಾರ್ಯಕ್ರಮಗಳನ್ನು ಜನರು ಬಯಸುತ್ತಿದ್ದಾರೆ ಎಂದರು.

ಇಂದಿನ ಕಾಂಗ್ರೆಸ್ ದುರಾಡಳಿತವನ್ನು ದೂರ ಮಾಡಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಸಂಕಲ್ಪ ಮಾಡುವ ದಿನ ಇದಾಗಿದೆ. ಆ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗಟಿನಿಂದ ಮತ್ತೆ ಬಿಜೆಪಿ ಅಧಿಕಾರಕ್ಕೆ ತರುತ್ತೇವೆ ಎಂದು ಹೇಳಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read