HomeLatest NewsBREAKING: ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್; ಸಿನೆಮಾ ಇನ್ನೂ ಬಾಕಿಯಿದೆ: ಕೆಲವೇ ದಿನಗಳಲ್ಲಿ ಚಿತ್ರ...

BREAKING: ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್; ಸಿನೆಮಾ ಇನ್ನೂ ಬಾಕಿಯಿದೆ: ಕೆಲವೇ ದಿನಗಳಲ್ಲಿ ಚಿತ್ರ ಬಿಡುಗಡೆ: ಸಂಸದ ಬೊಮ್ಮಾಯಿ ವ್ಯಂಗ್ಯ

ನವದೆಹಲಿ: ಸಿಎಂ-ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್, ಸಿನೆಮಾ ಇನ್ನೂ ಬಾಕಿ ಇದೆ. ಕೆಲವೇ ದಿನಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದುಗೆ ಮಾತನಾಡಿದ ಸಂಸದ ಬೊಮ್ಮಾಯಿ, ಕೆಲವೇ ದಿನದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಏನು ಎನ್ನುವುದು ಹೊರಬೀಳಲಿದೆ. ಸಿಎಂ ಸಿದ್ದರಾಮಯ್ಯ- ಡಿಸಿಎಂ ಡಿ.ಕೆ.ಶಿವಕುಮಾರ್ ಇಬ್ಬರೂ ಒಬ್ಬರಿಗೊಬ್ಬರು ಬ್ರೇಕ್ ಫಾಸ್ಟ್ ಮಾಡುತ್ತ ಕಾಲಹರಣ ಮಾಡುತ್ತಿದ್ದರೆ ರಾಜ್ಯದ ಜನರ ಶ್ರೇಯೋಭಿವೃದ್ದಿ ಯಾರು ಮಾಡುತ್ತಾರೆ? ಒಬ್ಬರು ಕುರ್ಚಿಯನ್ನು ಕಸಿಯಲು ಪ್ರಯತ್ನಿಸುತ್ತಿದ್ದಾರೆ. ಇನ್ನೊಬ್ಬರು ಅದನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಕರ್ನಾಟಕದ ನಾಟಕ ನಿಲ್ಲಬೇಕು ಎನ್ನುವುದು ರಾಜ್ಯದ ಜನರ ಇಚ್ಛೆಯಾಗಿದೆ ಎಂದರು.

ಕಾಂಗ್ರೆಸ್ ನಲ್ಲಿ ಇನೂ ಗೊಂದಲ ಮುಂದುವರೆದಿದೆ. ಕಾಂಗ್ರೆಸ್ ಹೈಕಮಾಂಡ್ ಎಲ್ಲಿದೆ? ಯಾರು ಹೈಕಮಾಂಡ್? ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೇ ತಮ್ಮ ಮೇಲೆ ಹೈಕಮಾಂಡ್ ಇದೆ ಎಂದು ಹೇಳಿದ ಮೇಲೆ ಹೈಕಮಾಂಡ್ ಗೆ ಏನು ಅರ್ಥ ಇದೆ. ಇದು ಒಂದು ಕುಟುಂಬದ ವಿಷಯ ಆಗಿದೆ ಎಂದು ಟೀಕಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular