BREAKING: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದ ಕಾರಣ ಬಸವರಾಜ ಬೊಮ್ಮಾಯಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗೆ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ನಿಕಟ ಪೂರ್ವ ಮುಖ್ಯಮಂತ್ರಿಗಳು, ಆತ್ಮೀಯರು ಆದ ಬಸವರಾಜ ಬೊಮ್ಮಾಯಿ ಆದಷ್ಟು ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ವೈದ್ಯರ ಸಲಹೆ ಮೇರೆಗೆ ಮೊಣಕಾಲು ನೋವಿನ ಶಸ್ತ್ರಚಿಕಿತ್ಸೆಗಾಗಿ ಬಸವರಾಜ ಬೊಮ್ಮಾಯಿ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗಿದೆ.

https://twitter.com/BSYBJP/status/1713942821282230768

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read