HomeKarnatakaಬಿಜೆಪಿ ಶಾಸಕರ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾಜಿ ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ: ಯಾವುದೇ ಶಾಸಕರು...

ಬಿಜೆಪಿ ಶಾಸಕರ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾಜಿ ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ: ಯಾವುದೇ ಶಾಸಕರು ಕಾಂಗ್ರೆಸ್ ಗೆ ಹೋಗಲ್ಲ ಎಂದು ಸ್ಪಷ್ಟನೆ

ಬೆಂಗಳೂರು: ಬಿಜೆಪಿಯ ಯಾವುದೇ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ತನ್ನ ಲೋಪ ಮುಚ್ಚಿಕೊಳ್ಳಲು ಸುಳ್ಳು ಸುದ್ದಿ ಹರಡುತ್ತಿದೆ. ಮುಖ್ಯಮಂತ್ರಿಗೆ ಶಾಸಕರು ಬರೆದಿದ್ದ ಪತ್ರ ನಕಲಿ ಎಂದು ಘೋಷಿಸಿಬಿಟ್ಟರು. ಪತ್ರಕ್ಕೆ ಯಾರು ಸಹಿ ಹಾಕಿದ್ದರೋ ಅವರನ್ನು ಕರೆದು ಮಾತನಾಡಬೇಕಿತ್ತು. ಅದನ್ನು ಬಿಟ್ಟು ಮಾಧ್ಯಮಗಳಿಗೆ ನೋಟಿಸ್ ನೀಡುತ್ತಿದ್ದೀರಾ ಎಂದು ಕಿಡಿ ಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಮಗಾರಿ ಬಿಲ್ ನೀಡುತ್ತಿಲ್ಲ ಎಂದು ಗುತ್ತಿಗೆದಾರರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ತನಿಖೆ ನೆಪದಲ್ಲಿ ದೂರು ನೀಡಿದ್ದ ಗುತ್ತಿಗೆದಾರರ ವಿಚಾರಣೆ ಮಾಡಲಾಗುತ್ತಿದೆ. ನಿಮ್ಮ ವಿರುದ್ಧ ದನಿ ಎತ್ತಿದವರ ದನಿ ಅಡಗಿಸಲು ಪ್ರಯತ್ನ ಮಾಡುತ್ತೀರಾ? ರಾಜ್ಯ ಸರ್ಕಾರದ ಇಂತಹ ನಡೆಗೆ ಬಿಜೆಪಿ ಅವಕಾಶ ನೀಡುವುದಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular