ಬೆಂಗಳೂರು: ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಸ್ಥರಿಗೆ ವಾಣಿಜ್ಯ ತೆರಿಗೆ ಇಲಾಖೆಯವರು ನೊಟಿಸ್ ಕೊಟ್ಟಿದ್ದು ಸಣ್ಣ ವ್ಯಾಪಾರಸ್ಥರಿಗೆ ದೊಡ್ಡ ಆಘಾತವಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರದ ಮೇಲೆ ಹಾಕಿ ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಸಂಸದ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಜಿಎಸ್ ಟಿ ಕೌನ್ಸಿಲ್ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜಂಟಿ ಜವಾಬ್ದಾರಿ ಇದೆ. ರಾಜ್ಯದ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಹೊಣೆ ಮತ್ತು ನಿರ್ವಹಣೆಯನ್ನು ರಾಜ್ಯ ವಾಣಿಜ್ಯ ತೆರಿಗೆ ಇಲಾಖೆಯವರು ನೋಡುತ್ತಾರೆ. ಈಗ ಸಣ್ಣ ವ್ಯಾಪಾರಿಗಳಿಗೆ ನೊಟೀಸ್ ಕೊಟ್ಟಿರುವುದರಿಂದ ಅವರ ವ್ಯಾಪಾರ ಬಂದ ಆಗಿರುವುದು ದೊಡ್ಡ ಹೊಡೆತ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಣ್ಣ ವ್ಯಾಪಾರಸ್ಥ ಮುಖಂಡರನ್ನು ಕರೆದು ಮಾತನಾಡಬೇಕು. ಸಿಎಂ ಹಣಕಾಸು ಸಚಿವರಾಗಿದ್ದು ಅವರು ಇದನ್ನು ಬಗೆ ಹರಿಸಬೇಕು. ಹಾಗೂ ಮುಂದಿನ ದಿನಗಳಲ್ಲಿ ವ್ಯಾಪಾರಸ್ಥರು ಕಾನೂನು ಬದ್ದವಾಗಿ ತೆರಿಗೆ ಕಟ್ಟಲು ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಎಲ್ಲ ಗೊತ್ತಿದ್ದು ದಾರಿ ತಪ್ಪಿಸುತ್ತಿದ್ದಾರೆ. ರಾಜ್ಯದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳೇ ನೊಟೀಸ್ ಕೊಟ್ಟಿದ್ಸಾರೆ. ಇಲ್ಲಿ ಯಾರೂ ಯಾರ ಬಾಯಿಗೆ ವರೆಸುವ ಪ್ರಶ್ನೆ ಇಲ್ಲ. ಅವರು ಜಾರಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.