HomeLatest NewsBIG NEWS: ಧರ್ಮಸ್ಥಳ ಪ್ರಕರಣ: ಯಾರನ್ನೋ ಗುರಿಯಾಗಿಸಿಕೊಂಡು ತನಿಖೆ ನಡೆಸಬಾರದು: ಸಂಸದ ಬಸವರಾಜ್ ಬೊಮ್ಮಾಯಿ

BIG NEWS: ಧರ್ಮಸ್ಥಳ ಪ್ರಕರಣ: ಯಾರನ್ನೋ ಗುರಿಯಾಗಿಸಿಕೊಂಡು ತನಿಖೆ ನಡೆಸಬಾರದು: ಸಂಸದ ಬಸವರಾಜ್ ಬೊಮ್ಮಾಯಿ

ಬೆಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣದ ಕುರುತು ತನಿಖೆಗೆ ರಾಜ್ಯ ಸರ್ಕಾರ ಎಸ್ ಐಟಿ ರಚನೆ ಮಾಡಿದ್ದು, ಈ ಬಗ್ಗೆ ಬಿಜೆಪಿ ಸಂಸದ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ್ ಬೊಮ್ಮಾಯಿ, ಎಸ್ ಐಟಿ ತನಿಖೆಗೆ ನೀಡಿರುವುದನ್ನು ಸ್ವಾಗತ ಮಾಡುತ್ತೇವೆ. ಕಾಲ ಮಿತಿಯಲ್ಲಿ ಕಾನೂಬದ್ದವಾಗಿ ಎಸ್ ಐಟಿ ತನಿಖೆಯಾಗಬೇಕು. ಯಾರನ್ನೋ ಗುರಿಯಾಗಿಸಿಕೊಂಡು ತನಿಖೆ ನಡೆಯಬಾರದು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಧರ್ಮಸ್ಥಳದ ಬಗ್ಗೆ ಸ್ಥಳೀಯರು ಹಾಗೂ ಅಲ್ಲಿ ಬಹಳ ದಿನಗಳವರೆಗೆ ಕೆಲಸ ಮಾಡಿರುವ ಪೊಲಿಸರಿಗೆ ಗೊತ್ತಿರುತ್ತದೆ. ದೂರು ಕೊಟ್ಟವರು ತಮ್ಮ ಮೇಲೆ ಒತ್ತಡ ಇದೆ ಎಂದು ಹೇಳಿದ್ದಾರೆ. ದೂರು ಕೊಟ್ಟವರಿಗೆ ಯಾರು ಒತ್ತಡ ಹಾಕಿದ್ದಾರೆ ಎಂದು ಹೇಳಬೇಕು ಈ ಬಗ್ಗೆ ತನಿಖೆಯಾಗಬೇಕು. ಅಲ್ಲಿ ನಡೆದಿರುವ ಪ್ರಕರಣದ ಬಗ್ಗೆ‌ ಪೊಲಿಸರು ಕ್ರಮ ಕೈಗೊಳ್ಳಬೇಕು. ಧರ್ಮಸ್ಥಳ ಪುರಾತನ ಹಾಗೂ ನಂಬಿಕೆಗೆ ಹೆಸರಾಗಿರುವ ದೇವಸ್ಥಾನ, ಆ ದೇವಸ್ಥಾನದ ಮೇಲಿನ ಜನರ ನಂಬಿಕೆ ಕೆಡಿಸುವ ಕೆಲಸವನ್ನು ಮಾಡಬಾರದು ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular