HomeKarnatakaಸಂಸದ ಬಸವರಾಜ್ ಬೊಮ್ಮಾಯಿ ಸೇರಿ ಮೂವರಿಗೆ ಹಾವೇರಿ ವಿವಿಯಿಂದ ಗೌರವ ಡಾಕ್ಟರೇಟ್

ಸಂಸದ ಬಸವರಾಜ್ ಬೊಮ್ಮಾಯಿ ಸೇರಿ ಮೂವರಿಗೆ ಹಾವೇರಿ ವಿವಿಯಿಂದ ಗೌರವ ಡಾಕ್ಟರೇಟ್

ಹಾವೇರಿ: ಹಾವೇರಿ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವ ಏಪ್ರಿಲ್ 6ರಂದು ನಡೆಯಲಿದ್ದು, ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಸೇರಿ ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ಆಡಳಿತ ಮಂಡಳಿ ತಿಳಿಸಿದೆ.

ವಿಶೇಷ ಸಿಂಡಿಕೇಟ್ ಸಭೆ ನಡೆಸಿ ಸಾಧಕರನ್ನು ಗೌರವ ಡಾಕ್ಟರೇಟ್ ಗೆ ಆಯ್ಕೆ ಮಾಡಲಾಗಿದೆ ಎಂದು ಕುಲಪತಿ ಪ್ರೊ.ಸುರೇಶ್ ಜಂಗಮಶೆಟ್ಟಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಮಾಜಿಕ ಸೇವೆ ಪರಿಗಣಿಸಿ ಹಾವೇರಿ-ಗದಗ ಸಂಸದ ಬಸವರಾಜ್ ಬೊಮ್ಮಾಯಿ, ಶೈಕ್ಷಣಿಕ ಸೇವೆ ಪರಿಗಣಿಸಿ ಹಾವೇರಿಯ ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ ಹಾಗೂ ಸಾಹಿತ್ಯ ಸೇವೆ ಪರಿಗಣಿಸಿ ಕವಿ ಸತೀಶ್ ಕುಲಕರ್ಣಿ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುವುದು.

ಹಾವೇರಿಯ ಜಿ.ಎಸ್.ಕಾಲೇಜು ಸಭಾಭವನದಲ್ಲಿ ಏಪ್ರಿಲ್ 6ರಂದು ನಡೆಯಲಿರುವ ಘಟಿಕೋತ್ಸವದಲ್ಲಿ ರಾಜ್ಯಪಾಲರು, ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular