HomeKarnatakaಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆ

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆ

ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಶಿಗ್ಗಾಂವಿ -ಸವಣೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಅವರು ಇಂದು ಬೆಳಗ್ಗೆ 11 ಗಂಟೆಗೆ ಶಿಗ್ಗಾಂವಿ ತಹಶೀಲ್ದಾರ್ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಲಿದ್ದಾರೆ.

ಚುನಾವಣೆ ಘೋಷಣೆಯಾದ ನಂತರ ಸ್ವಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಲು ಆಗಮಿಸುತ್ತಿರುವ ಬೊಮ್ಮಾಯಿ ದಿನವಿಡಿ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಿದ್ದಾರೆ. ನಾಮಪತ್ರ ಸಲ್ಲಿಸಿದ ನಂತರ ಸವಣೂರು, ಕಾರಡಗಿ, ಶಿಗ್ಗಾಂವಿ ಸೇರಿದಂತೆ ವಿವಿಧಡೆ ಜಿಲ್ಲಾ ಪಂಚಾಯಿತಿವಾರು ಕಾರ್ಯಕರ್ತರ ಜೊತೆ ಚರ್ಚೆ ನಡೆಸಲಿದ್ದಾರೆ. ಸತತ ಮೂರು ಬಾರಿ ಶಿಗ್ಗಾಂವಿ ಕ್ಷೇತ್ರದಿಂದ ಜಯಗಳಿಸಿದ ಬೊಮ್ಮಾಯಿ ನಾಲ್ಕನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿಯುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular