BIG NEWS: ಡಿ.ಕೆ.ಶಿವಕುಮಾರ್ ಸಹನೆಯಕಟ್ಟೆ ಯಾವಾಗ ಒಡೆಯುತ್ತೆ ನೋಡಬೇಕಿದೆ: ಕಾಂಗ್ರೆಸ್ ಡಿನ್ನರ್ ಪಾಲಿಟಿಕ್ಸ್ ಗೆ ಬೊಮ್ಮಾಯಿ ಟಾಂಗ್

ಬೆಂಗಳೂರು: ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಸಾಲು ಸಾಲು ಡಿನ್ನರ್ ಮೀಟಿಂಗ್ ವಿಚಾರ ವಿಪಕ್ಷ ಬಿಜೆಪಿ ವಾಗ್ದಾಳಿ ಗೆ ಕಾರಣವಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸದಲ್ಲಿದ್ದ ವೇಳೆ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್ ಮೀಟಿಂಗ್ ಆಯೋಜಿಸಲಾಗಿತ್ತು. ಇದರ ಬಳಿಕ ಗೃಹ ಸಚಿವ ಪರಮೇಶ್ವರ್ ನಿವಾಸದಲ್ಲಿ ನಿಗದಿಯಾಗುತ್ತಿದ್ದ ಡಿನ್ನರ್ ಮೀಟಿಂಗ್ ಗೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ ಹಾಕಿತ್ತು. ಈ ಹಿನೆಲೆಯಲ್ಲಿ ಗೃಹ ಸಚಿವ ಪರಮೇಶ್ವರ್ ಮನೆಯಲ್ಲಿ ಆಯೋಜಿಸಲಾಗಿದ್ದ ಡಿನ್ನರ್ ಮೀಟಿಂಗ್ ಮುಂದೂಡಿಕೆಯಾಗಿದೆ. ಕಾಂಗ್ರೆಸ್ ನಾಯಕರ ಡಿನ್ನರ್ ಮೀಟಿಂಗ್ ಬಗ್ಗೆ ಬಿಜೆಪಿ ನಾಯಕರು ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ನಾಯಕರ ಡಿನರ್ ಮೀಟಿಂಗ್ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾದಿದ ಸಂಸದ ಬಸವರಾಜ್ ಬೊಮ್ಮಾಯಿ, ಕಾಂಗ್ರೆಸ್ ನಲ್ಲಿನ ಸಭೆ ನಿರೀಕ್ಷಿತ.  ಬಹಳ ಮುಖ್ಯ ವಿಚಾರ ಡಿಕೆಶಿವಕುಮಾರ್ ಅವರ ಸಹನೆ ಅವರು ತಮ್ಮ ವ್ಯಕ್ತಿತ್ವಕ್ಕೆ ವಿರುದ್ಧವಾಗಿ ಬಹಳ ಸಹನೆ ಪ್ರದರ್ಶನ ಮಾಡುತ್ತಿದ್ದಾರೆ.  ಡಿ.ಕೆ.ಶಿವಕುಮಾರ್ ಸಹನೆ ಎನ್ನಬೇಕೋ ಅಥವಾ ಅವರ ಮುತ್ಸದ್ದಿತನ, ಹೈಕಮಾಂಡ್ ಸೂಚನೆ ಎನ್ನಬೇಕೋ ಗೊತ್ತಿಲ್ಲ ಎಂದು ಮಾರ್ಮಿಕವಾಗಿ ಹೇಳಿದರು.

ಕಾಂಗ್ರೆಸ್ ನಾಯಕರ ಸಭೆ ಬೆಳವಣಿಗೆ ನೋಡುವುದಾದರೆ ಸದ್ಯದ ಪ್ರಶ್ನೆ ಡಿ.ಕೆ.ಶಿವಕುಮಾರ್ ಸಹನೆಯ ಕಟ್ಟೆ ಯಾವಾಗ ಒಡೆಯಲಿದೆ ನೋಡಬೇಕು ಎಂದು ಟಾಂಗ್ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read