HomeKarnatakaಯಾವಾಗಲೂ ಬಿಜೆಪಿ ಬಂಡಾಯದ ಬಗ್ಗೆ ಮಾತನಾಡುತ್ತಿದ್ದ ಡಿಸಿಎಂ ಈಗ ಕಾಂಗ್ರೆಸ್ ಬಂಡಾಯಕ್ಕೆ ಏನು ಹೇಳ್ತಾರೆ? ಮಾಜಿ...

ಯಾವಾಗಲೂ ಬಿಜೆಪಿ ಬಂಡಾಯದ ಬಗ್ಗೆ ಮಾತನಾಡುತ್ತಿದ್ದ ಡಿಸಿಎಂ ಈಗ ಕಾಂಗ್ರೆಸ್ ಬಂಡಾಯಕ್ಕೆ ಏನು ಹೇಳ್ತಾರೆ? ಮಾಜಿ ಸಿಎಂ ಬೊಮ್ಮಾಯಿ ಟಾಂಗ್

ಹಾವೇರಿ: ಬಿಜೆಪಿಯಲ್ಲಿನ ಬಂಡಾಯದ ಬಗ್ಗೆ ಮಾತನಾಡುವ ಡಿಸಿಎಂ ಡಿ.ಕೆ.ಶಿವಕುಮಾರ್ ಕೋಲಾರ, ಚಿಕ್ಕಬಳ್ಳಾಪುರ ಬಾಗಲಕೋಟೆಯಲ್ಲಿನ ಅವರ ಪಕ್ಷದ ಬಂಡಾಯದ ಬಗ್ಗೆ ಏನು ಹೇಳುತ್ತಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.

ಹಾವೇರಿಯ ಅಸುಂಡಿ ಗ್ರಾಮದಲ್ಲಿ ಚುನಾವಣಾ ಪ್ರಚಾರದ ಬಳಿ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ಕೋಲಾರ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರು ರಾಜೀನಾಮೆಗೆ ಮುಂದಾಗಿದ್ದಾರೆ. ಕೋಲಾರ ಕಾಂಗ್ರೆಸ್ ನಲ್ಲಿ ಬಹಳ ವರ್ಷಗಳಿಂದ ಎರಡು ಗುಂಪುಗಾರಿಕೆ ಇದೆ. ಡಿಕೆ ಶಿವಕುಮಾರ್ ಅವರು ನಮ್ಮ ಪಕ್ಷದ ಭಿನ್ನಮತದ ಬಗ್ಗೆ ಬಹಳ ಮಾತನಾಡುತ್ತಿದ್ದಾರಡ. ಈಗ ಡಿಕೆ ಶಿವಕುಮಾರ್ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ನಲ್ಲಿ ಬಾಗಲಕೋಟೆ, ಚಿಕ್ಕಬಳ್ಳಾಪುರ ಕೋಲಾರ ಸೇರಿದಂತೆ ಎಲ್ಲಾ ಕಡೆ ಬಂಡಾಯ ಇದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಶಾಸಕರಾದ ಶಿವರಾಮ್ ಹೆಬ್ಬಾರ್, ಎಸ್ ಟಿ ಸೋಮಶೇಖರ್ ಬಿಜೆಪಿ ತೊರೆಯುವ ಬಗ್ಗೆ ಅದನ್ನು ಅವರೇ ಹೇಳಬೇಕು ಎಂದರು.

ಇನ್ನು ಬಸವರಾಜ ಬೊಮ್ಮಾಯಿ ದಾವಣಗೆರೆ ಚಾರ್ಲಿ ಎಂಬ ಸಚಿವ ಹೆಚ್ ಕೆ ಪಾಟೀಲ್ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಅವರು, ಹೆಚ್ ಕೆ ಪಾಟೀಲ್ ನಮ್ಮ ಹಿರಿಯರು ಚುನಾವಣೆ ಸಂದರ್ಭದಲ್ಲಿ ವಯಕ್ತಿಕ ವಿಚಾರದ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ಅವರು ಹತಾಶರಾಗಿ ಮಾತನಾಡುತ್ತಿದ್ದಾರೆ.

ಅವರು ಈ ವಯಸ್ಸಿನಲ್ಲಿ ಮಂತ್ರಿಗಿರಿಯಲ್ಲಿದ್ದಾರೆ, ನಾನು ಸಂಸದನಾಗಿ ಕೆಲಸ ಮಾಡಲು ಏನು ತೊಂದರೆ ಇದೆ? ಅವರಿಗೆ ಬೇರೆ ಏನೂ ಮಾತನಾಡಲು ಅವಕಾಶ ಇಲ್ಲ. ಅವರನ್ನು ಸುಸಂಸ್ಕೃತ ಮಂತ್ರಿ ಅಂತ ನಾವು ತಿಳಿದುಕೊಂಡಿದ್ದೇವೆ ಎಂದು ತಿರುಗೇಟು ನೀಡಿದರು.

For Latest News Updates, Join Our Whatsapp Community🚩
RELATED ARTICLES

Most Popular