HomeKarnatakaBIG NEWS: ರಾಜ್ಯದಲ್ಲಿ ಹಿಜಾಬ್ ನಿಷೇಧವೇ ಆಗಿಲ್ಲ; ಕಾಂಗ್ರೆಸ್ ನವರು ಗುಂಗಿನಲ್ಲಿದ್ದಾರೆ ಎಂದ ಮಾಜಿ ಸಿಎಂ...

BIG NEWS: ರಾಜ್ಯದಲ್ಲಿ ಹಿಜಾಬ್ ನಿಷೇಧವೇ ಆಗಿಲ್ಲ; ಕಾಂಗ್ರೆಸ್ ನವರು ಗುಂಗಿನಲ್ಲಿದ್ದಾರೆ ಎಂದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ಹಿಜಾಬ್ ನಿಷೇಧ ವಾಪಾಸ್ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ರಾಜಕೀಯವಾಗಿ ಭಾರಿ ಚರ್ಚೆಗೆ ಕಾರಣವಾಗಿದ್ದು, ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಹಿಜಾಬ್ ನಿಷೇಧ ಆದೇಶ ಹಿಂಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಸಿಂ ಸಿದ್ದರಾಮಯ್ಯ ಹೇಳಿಕೆ ರಾಜಕೀಯ ಪ್ರೇರಿತ. ರಾಜ್ಯದಲ್ಲಿ ಹಿಜಾಬ್ ನಿಷೇಧವೇ ಆಗಿಲ್ಲ, ಹಾಗಿರುವಾಗ ನಿಷೇಧ ಆದೇಶ ವಾಪಾಸ್ ಹೇಗೆ ಪಡಿತಾರೆ? ಎಂದು ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿಜಾಬ್ ನಿಷೇಧ ಪ್ರಶ್ನೆಯೇ ಬಂದಿಲ್ಲ. ಶಾಲೆಗಳಲ್ಲಿ ಈಗಾಗಲೇ ಸಮವಸ್ತ್ರ ನೀತಿ ಜಾರಿಯಲ್ಲಿದೆ. ಹೀಗಿರುವಾಗ ಶಾಲೆಗಳಲ್ಲಿ ಸಮವಸ್ತ್ರ ಪಾಲನೆ ಮಾಡಬೇಕು. ಬೇರೆಡೆಗಳಲ್ಲಿ ಹಿಜಾಬ್ ಬಗ್ಗೆ ಯಾವುದೇ ಆದೇಶ ಮಾಡಿಲ್ಲ. ಕಾಂಗ್ರೆಸ್ ನವರು ಹಿಜಾಬ್ ನಿಷೇಧ ಮಾಡಲಾಗಿದೆ ಎಂಬ ಗುಂಗಿನಲ್ಲಿದ್ದಾರೆ. ಹಾಗಾಗಿ ಸಿದ್ದರಾಮಯ್ಯನವರು ಹಿಜಾಬ್ ನಿಷೇಧ ಆದೇಶ ವಾಪಾಸ್ ಪಡೆಯುವುದಾಗಿ ಹೇಳಿದ್ದಾರೆ. ಈ ಮೂಲಕ ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಕಿಡಿಕಾರಿದರು.

For Latest News Updates, Join Our Whatsapp Community🚩
RELATED ARTICLES

Most Popular