HomeKarnatakaBIG NEWS: ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ; ಸಿಎಂ, ಸಚಿವರು ತಮ್ಮ ಸ್ಥಾನ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ;...

BIG NEWS: ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ; ಸಿಎಂ, ಸಚಿವರು ತಮ್ಮ ಸ್ಥಾನ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ; ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ

ಬೆಳಗಾವಿ: ರಾಜ್ಯ ಸರ್ಕಾರ ಸಂಪೂರ್ಣವಾಗಿ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. ರಾಜ್ಯದ ಜನರ ಸಂಕಷ್ಟದ ಬಗ್ಗೆ ಮುಖ್ಯಮಂತ್ರಿಗಳಿಗೆ ಕಿಂಚಿತ್ತೂ ಗಮನವಿಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಹಲವೆಡೆ ಅತಿವೃಷ್ಟಿಯಿಂದಾಗಿ ಮನೆಗಳ ಹಾನಿ, ಜಾನುವಾರುಗಳ ಸಾವು ದೊಡ್ಡ ಪ್ರಮಾಣದಲ್ಲಿ ಆಗಿದೆ. 11 ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಇದೆ. ಉಳಿದ ಜಿಲ್ಲೆಗಳಲ್ಲಿ ಬರದ ಛಾಯೆ ಆವರಿಸಿದೆ. ಆದರೆ ರಾಜ್ಯ ಸರ್ಕಾರ ಈ ಬಗ್ಗೆ ಯಾವುದೇ ಗಮನ ಇಲ್ಲ. ಸಿಎಂ ಸಿದ್ದರಾಮಯ್ಯ ವಿಡಿಯೋ ಕಾನ್ಫರೆನ್ಸ್ ಮಾಡಿದ್ದು ಬಿಟ್ಟರೆ ಯಾವುದೇ ಪರಿಹಾರ ಕಾರ್ಯ ಕೈಗೊಂಡಿಲ್ಲ ಎಂದು ಕಿಡಿಕಾರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮನೆ ಕಳೆದುಕೊಂಡವರಿಗೆ 10 ಲಕ್ಷ ಪರಿಹಾರ ನೀಡಬೇಕು. ಬೆಳೆ ನಾಶ ಆಗಿರುವುದಕ್ಕೆ ಪ್ರಾಥಮಿಕ ಸಮಿಕ್ಷೆ ಕೂಡ ಕೈಗೊಂಡಿಲ್ಲ. ಯಾವೊಬ್ಬ ಸಚಿವರೂ ಪ್ರವಾಹಪೀಡಿತ ಪ್ರದೇಶಕ್ಕೆ ಭೇಟಿ ಕೊಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬರಿ ರಾಜಕಾರಣದಲ್ಲಿ, ವರ್ಗಾವಣೆ ದಂಧೆಯಲ್ಲಿ ಸರ್ಕಾರ ಮುಳುಗಿದೆ. ಸಚಿವರ, ಶಾಸಕರ ನಡುವಿನ ಜಗಳ ಬಗೆಹರಿಸುವುದರಲ್ಲಿ ಕಾಲ ಕಳೆಯುತ್ತಾ, ಕುರ್ಚಿ ಉಳಿಸಿಕೊಳ್ಳಲು ಮುಖ್ಯಮಂತ್ರಿಗಳು ಹೆಣಗಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

 

For Latest News Updates, Join Our Whatsapp Community🚩
RELATED ARTICLES

Most Popular