BIG NEWS: ರಾಮ ಮಂದಿರ ನಿರ್ಮಾಣವಾಗುತ್ತಿರುವುದು ಕಾಂಗ್ರೆಸ್ ನವರಿಗೆ ಸಹಿಸಲಾಗುತ್ತಿಲ್ಲ; ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಆಕ್ರೋಶ

ಬೆಂಗಳೂರು: ಹುಬ್ಬಳ್ಳಿಯಲ್ಲಿ ಕರಸೇವಕರನ್ನು ಬಂಧಿಸಿರುವ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ರಾಮ ಮಂದಿರ ಉದ್ಘಾಟನೆಗೆ ಸಿದ್ದವಾಗಿರುವ ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ 30 ವರ್ಷದ ಹಳೆಯ ಪ್ರಕರಣವನ್ನು ಕೆದಕಿ ಹಿಂದೂ ಕರಸೇವಕರ ಬಂಧನ ಮಾಡಿರುವುದು ಅತ್ಯಂತ ಖಂಡನೀಯ ಎಂದು ಕಿಡಿಕಾರಿದ್ದಾರೆ.

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಆಗುತ್ತಿರುವಂತ್ತಿರುವುದು ಕಾಂಗ್ರೆಸ್ ನವರಿಗೆ ಸಹಿಸಲು ಆಗುತ್ತಿಲ್ಲ. ಇಡೀ ದೇಶದ ಜನ ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರನ್ನು ಬಂಧಿಸುವುದರ ಹಿಂದಿನ ಉದ್ದೇಶ ಏನು? ಎಂದು ಪ್ರಶ್ನಿಸಿದ್ದಾರೆ.

ಇಡೀ ದೇಶವೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಬೆಂಬಲ ಕೊಡುತ್ತಿರುವ ಸಂದರ್ಭದಲ್ಲಿ ಈ ರೀತಿ ನಡೆಯುತ್ತಿದೆ. ರಾಜ್ಯದಲ್ಲಿ ಕಾನೂನು ಪಾಲನೆ ಮಾಡುವವರೇ ಕಾನೂನು ಉಲ್ಲಂಘನೆ ಮಾಡುತ್ತಿರುವುದಕ್ಕೆ ಇದು ಸ್ಪಷ್ಪ ನಿದರ್ಶನ ಎಂದು ಗುಡುಗಿದ್ದಾರೆ

ಈಗಾಗಲೇ ರಾಮ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣಕ್ಕೆ ವಿರೋಧ ಮಾಡಿರುವುದಕ್ಕೆ ಕಾಂಗ್ರೆಸ್ ಗೆ ಸಂಸತ್ತಿನಲ್ಲಿ ಪ್ರತಿಪಕ್ಷದ ಸ್ಥಾನವೂ ಇಲ್ಲದಂತಾಗಿದೆ. ಈ ರೀತಿಯ ದ್ವೇಷದ ರಾಜಕಾರಣದಿಂದ ರಾಜ್ಯದಲ್ಲಿಯೂ ಕಾಂಗ್ರೆಸ್ ಅಂತ್ಯ ಕಾಣುವುದೂ ನಿಶ್ಚಿತ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read