BIG NEWS: ಜೂನ್ 4ರ ಬಳಿಕ ಕಾಂಗ್ರೆಸ್ ನಲ್ಲಿ ಭಾರೀ ಬದಲಾವಣೆಯಾಗಲಿದೆ; ಮಾಜಿ ಸಿಎಂ ಬೊಮ್ಮಾಯಿ ಭವಿಷ್ಯ

ಕಲಬುರ್ಗಿ: ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಕಾಂಗ್ರೆಸ್ ನಲ್ಲಿ ಸಾಕಷ್ಟು ಬದಲಾವಣೆಯಾಗಲಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.

ಕಲಬುರ್ಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ಜೂನ್ 4ರ ಬಳಿಕ ಕಾಂಗ್ರೆಸ್ ನಲ್ಲಿ ಸಾಕಷ್ಟು ಬದಲಾವಣೆಯಾಗಲಿದೆ. ಸಿಎಂ ಹಾಗೂ ಡಿಸಿಎಂ ನಡುವಿನ ಆಂತರಿಕ ಕಲಹ, ಸಚಿವರ ಅಸಮಾಧಾನದಿಂದಾಗಿಯೇ ಸರ್ಕಾರ ಉರುಳಲಿದೆ ಎಂದು ಹೇಳಿದ್ದಾರೆ.

ಚುನಾವಣೆ ಸಮಯದಲ್ಲಿ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆ ಗಮನಿಸಿದರೆ ವೈಯಕ್ತಿಕ ಪ್ರತಿಷ್ಠೆಯ ಪೈಪೋಟಿ ತೀವ್ರಗೊಂಡಿದೆ ಎಂಬುದು ಸ್ಪಷ್ಟವಾಗುತ್ತದೆ. ಲೋಕಸಭಾ ಚುನಾವಣೆಯಲ್ಲಿ ಹಲವು ಸಚಿವರು ತಾವು ಸ್ಪರ್ಧಿಸುವ ಬದಲು ತಮ್ಮ ಮಕ್ಕಳನ್ನು ಕಣಕ್ಕಿಳಿಸಿದ್ದಾರೆ. ಇದು ಅವರ ಹತಾಶೆಯ ಮತ್ತೊಂದು ಪ್ರತೀಕ. ಯಾಕೆಂದರೆ ರಾಜ್ಯದಲ್ಲಿ ರಾಜಕೀಯ ವಾತಾವರಣ ತಮಗೆ ಪ್ರತಿಕೂಲವಾಗಿದೆ ಎಂಬುದು ಅವರಿಗೆ ಗೊತ್ತಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read