HomeKarnatakaBIG NEWS: ಪ್ರಜ್ವಲ್ ಕೇಸ್ ಸಮರ್ಥನೆ ಮಾಡುವ ಪ್ರಶ್ನೆಯೇ ಇಲ್ಲ; ಆದರೆ ಎಸ್ಐಟಿ ತನಿಖೆಯ ರೀತಿ...

BIG NEWS: ಪ್ರಜ್ವಲ್ ಕೇಸ್ ಸಮರ್ಥನೆ ಮಾಡುವ ಪ್ರಶ್ನೆಯೇ ಇಲ್ಲ; ಆದರೆ ಎಸ್ಐಟಿ ತನಿಖೆಯ ರೀತಿ ಸರಿಯಿಲ್ಲ ಎಂದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಮರ್ಥನೆ ಮಾಡುವ ಪ್ರಶ್ನೆಯೇ ಇಲ್ಲ. ಆದರೆ, ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಪ್ರಕರಣದಲ್ಲಿ ಮಾಹಿತಿ ಕೊಟ್ಟವರನ್ನೇ ಬಂಧನ ಮಾಡುತ್ತಿದ್ದಾರೆ. ಎಸ್ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಸರಿಯಾದ ತನಿಖೆಗೆ ಸಿಬಿಐಗೆ ವಹಿಸಲಿ ಎಂದು ಆಗ್ರಹಿಸಿದರು.

ಎಸ್ ಐಟಿಯವರು ಅಪರಾಧಿಗಳನ್ನು ಬಂಧಿಸುತ್ತಿಲ್ಲ. ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಅಂದರೆ, ಸಿಬಿಐಗೆ ವಹಿಸಲಿ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಪ್ರಕರಣದಲ್ಲಿ ಯಾರ್ಯಾರ‌ ಹೆಸರು ಕೇಳಿಬರುತ್ತಿದೆಯೋ ಅವರ ವಿಚಾರಣೆಯೂ‌ ನಡೆಯಲಿ. ಅದಕ್ಕಾಗಿಯೇ ನಾವು ಪ್ರಕರಣ ಸಿಬಿಐಗೆ ಕೊಡಲಿ ಅಂತ ಕೇಳುತ್ತಿದ್ದೇವೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular