BIG NEWS: ಕಾಂಗ್ರೆಸ್ ಸರ್ಕಾರ ದೇಶ ವಿರೋಧಿಗಳನ್ನು ರಕ್ಷಿಸುತ್ತಿದೆ; ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಸಂವಿಧಾನ ಪ್ರಕಾರ ನಡೆದುಕೊಳ್ಳುತ್ಗಿಲ್ಲ. ದೇಶವಿರೋಧಿಗಳ ರಕ್ಷಣೆ ಮಾಡುತ್ತಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಸರ್ಕಾರದ ವಿರುದ್ಧ ಪ್ರತಿಭಟನೆಯಲ್ಲಿ ಪಾಲ್ಗೊಂಡ ಮಾಜಿ ಸಿಎಂ ಬೊಮ್ಮಾಯಿ, ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರವನ್ನು ವಜಾ ಮಾಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದರು.

ಕಾಂಗ್ರೆಸ್ ನವರು ‌ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದಾರೆ. ಮುಖ್ಯಮಂತ್ರಿ ಮಂಡಿಸಿರುವ ಬಜೆಟ್ ಸತ್ಯಕ್ಕೆ ದೋರವಾಗಿದೆ. ಈಗ ಪಾಕಿಸ್ತಾನ‌ ಪರ ಘೋಷಣೆ ಕೂಗಿದವರ ರಕ್ಷಣೆ ಮಾತನಾಡುತ್ತ ನೈತಿಕವಾಗಿ ದಿವಾಳಿಯಾಗಿದ್ದಾರೆ. ಇವರು ಪ್ರಜಾಪ್ರಭುತ್ವಕ್ಕೆ ದಕ್ಕೆಯಾಗುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ‌ ಎಂದು ಆರೋಪಿಸಿದರು.

ವಿಧಾನಸೌಧದಲ್ಲಿಯೇ ಪಾಕಿಸ್ತಾನದ ಪರ ಘೋಷಣೆ ಕೂಗಲಾಗಿದೆ. ಆದರೂ ಅಂತವರ ವಿರುದ್ಧ ಕ್ರಮ ಕೈಗೊಂಡಿಲ್ಲ. ದೇಶದ ರಕ್ಷಣೆಗೆ ಆಪತ್ತಿದೆ.ಅಧಿವೇಶವನ ಮುಗಿದ ಬಳಿಕ ಇದೆಲ್ಲವನ್ನು ಮರೆತು ಹೋಗುತ್ತಾರೆ ಎಂದು ಕಾಂಗ್ರೆಸ್ ನವರು ಅಂದುಕೊಂಡಿದ್ದಾರೆ. ಆದರೆ, ಇದನ್ನು ರಾಜ್ಯದ ಜನರು ಮರೆಯುವುದಿಲ್ಲ. ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಹೇಳಿದರು.

ಪಾಕಿಸ್ತಾನದ ಪರ ಸರ್ಕಾರ ನಿಂತಿದ್ದು, ಅಧಿಕಾರದಲ್ಲಿ ಮುಂದುವರೆಯಲು ಸರ್ಕಾರಕ್ಕೆ ನೈತಿಕತೆ ಇಲ್ಲ. ಈ ಸರ್ಕಾರವನ್ನು ಶೀಘ್ರವಾಗಿ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read