HomeKarnatakaರಾಜ್ಯ ಬಿಜೆಪಿ ಗೊಂದಲ ಸುಖಾಂತ್ಯವಾಗುವ ವಿಶ್ವಾಸವಿದೆ: ಸಂಸದ ಬೊಮ್ಮಾಯಿ

ರಾಜ್ಯ ಬಿಜೆಪಿ ಗೊಂದಲ ಸುಖಾಂತ್ಯವಾಗುವ ವಿಶ್ವಾಸವಿದೆ: ಸಂಸದ ಬೊಮ್ಮಾಯಿ

ದಾವಣಗೆರೆ: ರಾಜ್ಯ ಬಿಜೆಪಿಯಲ್ಲಿ ಯಾವುದೇ ಗೊಂದಲ ಇಲ್ಲ. ನಮ್ಮದು ಪ್ರಜಾಪ್ರಭುತ್ವ ಇರುವ ಪಕ್ಷ. ನಮ್ಮ ಹೈಕಮಾಂಡ್ ಬಹಳ ಗಟ್ಟಿಯಾಗಿದೆ ಎಂದು ಸಂಸದ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಬಸವರಾಜ್ ಬೊಮ್ಮಾಯಿ, ಈಗ ದೆಹಲಿ ಚುನಾವಣೆ ಮುಗಿದಿದೆ. ಸಂಘಟನೆಗೆ ಹೆಚ್ಚು ಸಮಯ ನೀಡುತ್ತಾರೆ. ಆಗ ಕರ್ನಾಟಕದ ಬಗ್ಗೆಯೂ ನಿರ್ಣಯ ಆಗುತ್ತದೆ. ಎಲ್ಲವೂ ಅತ್ಯಂತ ಸುಖಾಂತ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಅವರ ಹೆಸರು ಸೂಚಿಸಿದ್ದೀರಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ನಾನು ಯಾರ ಹೆಸರನ್ನೂ ಸೂಚಿಸಿಲ್ಲ. ನಾನು ಸಂಸದನಾಗಿ ನನ್ನ ಕೆಲಸವನ್ನು ಮಾಡುತ್ತಿದ್ದೇನೆ. ಏನೇ ಇದ್ದರೂ ಪಕ್ಷದ ಹೈಕಮಾಂಡ್ ಒಳ್ಳೆಯ ತೀರ್ಮಾನ ಮಾಡುತ್ತದೆ ಎನ್ನುವ ವಿಶ್ವಾಸ ಇದೆ. ಹೈಕಾಂಡ್ ಯಾರನ್ನು ಆಯ್ಕೆ ಮಾಡುತ್ತಾರೋ ಅವರೇ ಉತ್ತಮ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular