BIG NEWS: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ; ಮಾಜಿ ಸಿಎಂ ಬೊಮ್ಮಾಯಿ ಆಕ್ರೋಶ

ಧಾರವಾಡ: ರಾಜ್ಯದಲ್ಲಿ ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದಾರೆ.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ರೌಡಿಗಳಿಗೆ, ಗೂಂಡಾಗಳಿಗೆ ಪೊಲೀಸರೆಂದರೆ ಭಯವೇ ಇಲ್ಲದಾಗಿದೆ. ಸಮಾಜಘಾತುಕ ಶಕ್ತಿಗಳು ರಜಾರೋಷವಾಗಿ ಅಪರಾಧ ಕೃತ್ಯಗಳನ್ನು ನಡೆಸುತ್ತಿವೆ. ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಲ್ಲಾ ಕಡೆ ಕೊಲೆ, ಸುಲಿಗೆಗಳು ಅವ್ಯಾಹತವಾಗಿ ನಡೆಯುತ್ತಿವೆ. ಕಾಲೇಜು ಆವರಣದಲ್ಲಿಯೇ ನೇಹಾ ಹಿರೇಮಠ ಎಂಬ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗದಗದಲ್ಲಿ ನಗರಸಭೆಯ ಉಪಾಧ್ಯಕ್ಷೆ ಮಗ ಸೇರಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಲಾಗಿದೆ. ನಿನ್ನೆ ಬೆಂಗಳೂರಿನಲ್ಲಿ ಎರಡು ಕೊಲೆಗಳು ನಡೆದಿದೆ. ಹಲವಾರು ತಿಂಗಳಿಂದ ರಾಜ್ಯದಲ್ಲಿ ಇಂತಹ ಘಟನೆಗಳು ನಡೆಯುತ್ತಿವೆ. ಅಪಾರಧ ಕೃತ್ಯಗಳು ಹೆಚ್ಚುತ್ತಿವೆ ಎಂದು ಗುಡುಗಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಟ್ವೀಟ್ ಮಾಡಿದರೆ ಜವಾಬ್ದಾರಿ ಮುಗಿಯುವುದಿಲ್ಲ. ರಾಜ್ಯದಲ್ಲಿ ಅಪರಾಧ ಕೃತ್ಯಗಳು ನಿಯಂತ್ರಣಕ್ಕೆ ಬರಬೇಕು. ರೌಡಿಗಳು, ಗೂಂಡಾಗಳು, ಸಮಾಜಘಾತುಕ ಶಕ್ತಿಗಳನ್ನು ಹೆಡೆಮುರಿ ಕಟ್ಟುವ ಕೆಲಸವಾಗಬೇಕು. ಈ ಬಗ್ಗೆ ಸಿಎಂ ಗಂಭೀರವಾಗಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read