HomeKarnatakaBIG NEWS: ಇದೊಂದು ಯು ಟರ್ನ್ ಸರ್ಕಾರ: ರಾಜ್ಯ ಸರ್ಕಾರದ ವಿರುದ್ಧ ಸಂಸದ ಬೊಮ್ಮಾಯಿ ಆಕ್ರೋಶ

BIG NEWS: ಇದೊಂದು ಯು ಟರ್ನ್ ಸರ್ಕಾರ: ರಾಜ್ಯ ಸರ್ಕಾರದ ವಿರುದ್ಧ ಸಂಸದ ಬೊಮ್ಮಾಯಿ ಆಕ್ರೋಶ

ಹುಬ್ಬಳ್ಳಿ: ಹಗರಣಗಳ ಸುಳಿಯಲ್ಲಿ ಹಾಗೂ ಜನ ವಿರೋಧಿ ಅಲೆಯಲ್ಲಿ ಕಾಂಗ್ರೆಸ್ ಉಪಚುನಾವಣೆಯಲ್ಲಿ ಕೊಚ್ಚಿ ಹೋಗಲಿದೆ ಎಂದು ಬಿಜೆಪಿ ಸಂಸದ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಬೊಮ್ಮಾಯಿ, ರಾಜ್ಯ ಸರ್ಕಾರ ರೈತರಿಗೆ ವಕ್ಪ್ ಆಸ್ತಿ ಹೆಸರಿನಲ್ಲಿ ನೊಟೀಸ್ ಕೊಟ್ಟಿರುವುದಕ್ಕೆ ರಾಜ್ಯಾದ್ಯಂತ ಜನರು ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ. ಮುಖ್ಯಮಂತ್ರಿಗಳಿಗೆ ತಮ್ಮ ತಪ್ಪಿನ ಅರಿವಾಗಿ ನೊಟೀಸ್ ವಾಪಸ್ ತೆಗೆದುಕೊಳ್ಳಲು ಹೇಳಿದ್ದಾರೆ. ಸರ್ಕಾರ ತಪ್ಪು ಮಾಡದಿದ್ದರೆ ರೈತರಿಗೆ ನೀಡಿದ್ದ ನೋಟಿಸ್ ಯಾಕೆ ವಾಪಸ್ ಪಡೆಯುತ್ತಿದ್ದರು ಎಂದು ಪ್ರಶ್ನಿಸಿದರು.

ವಕ್ಪ್ ಸಚಿವ ಜಮೀರ್ ಅವರು ಮುಖ್ಯಮಂತ್ರಿಗಳ ಆದೇಶದ ಮೇರೆಗೆ ನೊಟೀಸ್ ನೀಡಲಾಗಿದೆ ಎಂದು ಹೇಳಿದ್ದಾರೆ. ಡಿಸಿಗಳು ಸಚಿವರ ಆದೇಶದ ಮೇರೆಗೆ ನೊಟೀಸ್ ನೀಡಿರುವುದಾಗಿ ಹೇಳಿದ್ದಾರೆ. ಈಗ ಜನ ತಿರುಗಿ ಬೀಳುತ್ತಾರೆ ಎನ್ನುವುದು ಗೊತ್ತಾದ ತಕ್ಷಣ ಯು ಟರ್ನ್ ಹೊಡೆಯುತ್ತಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೊಂದು ರೀತಿ ಯು ಟರ್ನ್ ಸರ್ಕಾರ ಮುಡಾದಲ್ಲಿ ಸೈಟ್ ಪಡೆದು ವಾಪಸ್ ಕೊಡುತ್ತಾರೆ. ವಾಲ್ಮೀಕಿ ನಿಗಮದ ಹಣ ಲೂಟಿ ಮಾಡಿ ಅದನ್ನು ವಾಪಸ್ ಹಾಕುವುದಾಗಿ ಹೇಳುತ್ತಾರೆ. ಈಗ ವಕ್ಪ್ ವಿಚಾರದಲ್ಲಿ ರೈತರಿಗೆ ನೋಟಿಸ್ ನೀಡಿ, ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ನೋಟಿಸ್ ವಾಪಸ್ ಪಡೆಯುತ್ತಾರೆ, ರಾಜ್ಯ ಸರ್ಕಾರ ನಿರಂತರ ಇದೇ ರೀತಿ ಮಾಡುತ್ತ ಬಂದಿದೆ ಎಂದು ಕಿಡಿಕಾರಿದರು.

 

For Latest News Updates, Join Our Whatsapp Community🚩
RELATED ARTICLES

Most Popular