BIG NEWS: ರಾಮ ಮಂದಿರ ವಿಚಾರವಾಗಿ ಸಿದ್ದರಾಮಯ್ಯನವರಿಗೆ ತಡವಾಗಿಯಾದರೂ ಜ್ಞಾನೋದಯವಾಗಿದೆ; ಮಾಜಿ ಸಿಂ ಬೊಮ್ಮಾಯಿ ಟಾಂಗ್

ಹುಬ್ಬಳ್ಳಿ: ಅಯೋಧ್ಯೆ ರಾಮ ಮಂದಿರಕ್ಕೆ ಜನವರಿ 22ರ ಬಳಿಕ ಹೋಗಿ ಬರುತ್ತೇನೆ ಎಂದಿರುವ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ರಾಮ ಮಂದಿರ ವಿಚಾರವಾಗಿ ಸಿದ್ದರಾಮಯ್ಯನವರಿಗೆ ತಡವಾಗಿಯದರೂ ಜ್ಞಾನೋದಯವಾಗಿದೆ ಎಂದು ಟಾಂಗ್ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ಸಿಎಂ ಸಿದ್ದರಾಮಯ್ಯ ರಾಜಕೀಯ ಕಾರಣಕ್ಕಾಗಿ ತಮ್ಮ ಹೆಸರಲಿರುವ ರಾಮನನ್ನೇ ಕಡೆಗಣಿಸಿದ್ದಾರೆ ಎಂದರು.

ಸಿಎಂ ಸಿದ್ದರಾಮಯ್ಯನವರು ತುಂಬಾ ಗೊಂದಲದಲ್ಲಿದ್ದಾರೆ. ಒಮ್ಮೆ ಅಯೋಧ್ಯೆಗೆ ಹೋಗುವುದಿಲ್ಲ ಎನ್ನುತ್ತಾರೆ. ಮತ್ತೊಮ್ಮೆ ಹೋಗುತ್ತೇನೆ ಎನ್ನುತ್ತಾರೆ. ರಾಮ ಮಂದಿರ ಉದ್ಘಾಟನೆ ಬಳಿಕ ಹೋಗಿ ಬರುತ್ತೇನೆ ಎಂದಿದ್ದಾರೆ. ಅವರ ಆತ್ಮಸಾಕ್ಷಿ ಅಯೋಧ್ಯೆಗೆ ಹೋಗಬೇಕು ಅಂತಿದೆ. ಆದರೆ ಹೈಕಮಾಂಡ್ ಬೇಡಾ ಅಂತಿದ್ದಾರೆ. ಹೀಗಾಗಿ ಅವರಿಗೆ ಗೊಂದಲವಾಗಿದೆ. ಆದರೂ ತಡವಾಗಿಯಾದರೂ ಜ್ಞಾನೋದಯವಾಗಿದೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read