HomeLatest Newsಸಿಎಂ ಸಿದ್ದರಾಮಯ್ಯರಿಂದ ಹಿಂದುಳಿದ ವರ್ಗದ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ: ಸಂಸದ ಬೊಮ್ಮಾಯಿ ವಾಗ್ದಾಳಿ

ಸಿಎಂ ಸಿದ್ದರಾಮಯ್ಯರಿಂದ ಹಿಂದುಳಿದ ವರ್ಗದ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ: ಸಂಸದ ಬೊಮ್ಮಾಯಿ ವಾಗ್ದಾಳಿ

ಬೆಂಗಳೂರು: 14 ನೇ ಹಣಕಾಸು ಆಯೋಗಕ್ಕೆ ಹೋಲಿಕೆ ಮಾಡಿದರೆ 15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಕೇಂದ್ರದಿಂದ 1 ಲಕ್ಷ ಕೋಟಿ ರೂ. ಗೂ ಹೆಚ್ಚು ಹಣ ಬರುತ್ತದೆ. ಗ್ಯಾರೆಂಟಿ ಯೋಜನೆಗೆ ಹಣ ಹೊಂದಿಸಲಾಗದೇ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ದ ರಾಜಕೀಯವಾಗಿ ಮಾತನಾಡುತ್ತಾರೆ‌ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು, ಹೊಸದೇನು ಹೇಳಿಲ್ಲ ಈಗಾಗಲೇ ಹಲವಾರು ಬಾರಿ ಸುಳ್ಳು ಹೇಳಿದ್ದಾರೆ. ಈಗ ಅದನ್ನೇ ಮತ್ತೆ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರದ ಅನುದಾನ ಶೇ 32 ರಿಂದ ಶೇ 42 ಕ್ಕೆ ಏರಿಸಿದ್ದರು. ಅವರು ಶೇ 10% ಹೆಚ್ಚಳ ಮಾಡಿದ್ದಾರೆ. ಅದು ಸಿದ್ದರಾಮಯ್ಯ ಅವರಿಗೆ ಗೊತ್ತಿದ್ದು ಮರೆ ಮಾಚುತ್ತಾರೆ. ಶೇ 40% ರಿಂದ 50% ಕ್ಕೆ ಹೆಚ್ಚಳ ಮಾಡಬೇಕೆನ್ನುವುದು ನಮ್ಮೆಲ್ಲರ ಬೇಡಿಕೆಯಾಗಿದೆ. 14 ನೇ ಹಣಕಾಸು ಆಯೋಗ ಸಭೆ ನಡೆಸಿದ ಸಂದರ್ಭದಲ್ಲಿ ಐದು ಜನ ಕಾಂಗ್ರೆಸ್ ಸಚಿವರಿದ್ದರು ಆಗ ರಾಜ್ಯದ ಪರವಾಗಿ ಸರಿಯಾಗಿ ವಾದ ಮಾಡದೇ ತಮ್ಮ ತಪ್ಪು ಮುಚ್ಚಿಕೊಳ್ಳಲು ಈ ರೀತಿ ಮಾತನಾಡುತ್ತಿದ್ದಾರೆ. ರಾಜ್ಯಕ್ಕೆ ಕಾಂಗ್ರೆಸ್ ನಿಂದಲೇ ಅನ್ಯಾಯವಾಗಿದೆ ಎಂದು ಆರೋಪಿಸಿದರು.

14 ನೇ ಹಣಕಾಸು ಆಯೋಗಕ್ಕೆ ಹೋಲಿಕೆ ಮಾಡಿದರೆ 15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಕೇಂದ್ರದಿಂದ 1 ಲಕ್ಷ ಕೋಟಿ ರೂ. ಹೆಚ್ಚಿಗೆ ಬರುತ್ತದೆ. ಈಗಾಗಲೇ 14 ನೇ ಹಣಕಾಸು ಆಯೋಗದಲ್ಲಿ ಬಂದಷ್ಟು ಹಣ ರಾಜ್ಯಕ್ಕೆ ಬಂದಿದೆ. ಇನ್ನು ಎರಡು ವರ್ಷ ಬರುತ್ತದೆ. ಗ್ಯಾರೆಂಟಿ ಯೋಜನೆಗೆ ಹಣ ಹೊಂದಿಸಲಾಗದೇ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ದ ರಾಜಕೀಯವಾಗಿ ಮಾತನಾಡುತ್ತಾರೆ‌. ರಾಜ್ಯದ ರೈಲ್ವೆ ಯೋಜನೆಗೆ ಯುಪಿಎ ಅವಧಿಯಲ್ಲಿ 700 ಕೋಟಿ ರೂ. ಬಂದಿತ್ತು. ಈ ವರ್ಷ ಕೇಂದ್ರ ಸರ್ಕಾರ 7700 ಕೋಟಿ ರೂ. ಕೊಟ್ಟಿದೆ ಅದಕ್ಕೆ ಮ್ಯಾಚಿಂಗ್ ಗ್ರ್ಯಾಂಟ್ ಕೊಡಲು ರಾಜ್ಯಸರ್ಕಾರಕ್ಕೆ ಆಗುತ್ತಿಲ್ಲ. ಆರೋಗ್ಯ, ಗ್ರಾಮಿಣಾಭಿವೃದ್ದಿ, ರಸ್ತೆ ಸೇರಿದಂತೆ ಹಲವಾರು ಯೋಜನೆಗಳಿಗೂ ಕೇಂದ್ರ ಸರ್ಕಾರ ಅನುದಾನ ನೀಡುತ್ತಿದೆ‌. ಅದನ್ನು ರಾಜ್ಯ ಸರ್ಕಾರ ಹೇಳುವುದಿಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಾತಿ ಸಮೀಕ್ಷೆ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕಿದೆ. ಮುಖ್ಯಮಂತ್ರಿಗಳು ಸುಮ್ಮನೆ ಹಿಂದುಳಿದ ವರ್ಗದ ಜನರ ಕಣ್ಣಿಗೆ ಮಣ್ಣೆರಚುತ್ತಿದ್ದಾರೆ. ಹತ್ತು ವರ್ಷದಿಂದ ಇವರೇ ಸಿಎಂ ಇದ್ದರು, ಆಗ ಯಾಕೆ ಮಾಡಲಿಲ್ಲ. ಜಾತಿ ಸಮೀಕ್ಷೆ ವಿಚಾರದಲ್ಲಿ ಸಿಎಂ ಬಹಳ ಸಂಕಷ್ಟಕ್ಕೆ ಸಿಲುಕಿದ್ದರು. ಹೈಕಮಾಂಡ್ ಅದರಿಂದ ಇವರನ್ನು ರಕ್ಷಿಸಿದೆ. ಆದರೆ, ಕೇಂದ್ರ ಸರ್ಕಾರವೇ ಮಾಡುವ ಜಾತಿ ಸಮೀಕ್ಷೆ ಅಂತಿಮ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular