BIG NEWS; ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮುಂದೆ ತಾನೇ ಸುಳ್ಳು ಹೇಳುತ್ತಿದೆ; ಮಾಜಿ ಸಿಎಂ ಬೊಮ್ಮಾಯಿ ಕಿಡಿ

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ರಾಜ್ಯ ಸರ್ಕಾರ ಮೇಲಿಂದ ಮೇಲೆ ತಪ್ಪು ಮಾಡಿ ಜನರನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ಸಿಡಬ್ಲುಎಂಎ ಆದೇಶದಂತೆ ನೀರು ಬಿಡುವುದಾದರೆ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸಲು ಏನಿದೆ? ಎಂದು ಪ್ರಶ್ನಿಸಿದರು.

ಸೆ.12ರ ಬಳಿಕ ತಮಿಳುನಾಡಿಗೆ ನೀರು ಬಿಡಲು ಆಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮುಂದೆ ರಾಜ್ಯ ಸರ್ಕಾರ ಅಫಿಡವಿಟ್ ಸಲ್ಲಿಸಿದೆ. ಅದಕ್ಕೆ ಬದ್ಧರಾಗಿರಬೇಕು. ಸರ್ಕಾರದ ಅಫಿಡವಿಟ್ ಎಂದರೆ ಸುಮ್ಮನೇ ಆಗಲ್ಲ. ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮುಂದೆ ತಾನೇ ಸುಳ್ಳು ಹೇಳುತ್ತಿದೆ ಎಂದಾಯಿತು ಎಂದು ಕಿಡಿಕಾರಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್, ನನ್ನ ಸಲಹೆ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವಂತದ್ದು ಎಂದು ಹೇಳಿದ್ದಾರೆ. ಸರ್ಕಾರದ ನಡೆ ರಾಜ್ಯದ ರೈತರನ್ನು, ಕಾವೇರಿ ಮಕ್ಕಳನ್ನು ಇಕ್ಕಟ್ಟಿಗೆ ಸಿಲುಕಿಸುವಂತದ್ದು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read