HomeKarnatakaBIG NEWS: ಈ ಸರ್ಕಾರ ರೈತರ ಪಾಲಿಗೆ ಜೀವಂತವಿಲ್ಲ; ಆರಂಭದಿಂದಲೂ ಎಡವಟ್ಟು ಮಾಡಿಕೊಂಡು ಬಂದಿದೆ; ಮಾಜಿ...

BIG NEWS: ಈ ಸರ್ಕಾರ ರೈತರ ಪಾಲಿಗೆ ಜೀವಂತವಿಲ್ಲ; ಆರಂಭದಿಂದಲೂ ಎಡವಟ್ಟು ಮಾಡಿಕೊಂಡು ಬಂದಿದೆ; ಮಾಜಿ ಸಿಎಂ ಬೊಮ್ಮಾಯಿ ಆಕ್ರೋಶ

ಹುಬ್ಬಳ್ಳಿ: ರಾಜ್ಯ ಸರ್ಕಾರ ಬರಿ ಹೇಳಿಕೆಗಳಲ್ಲಿ ಆಡಳಿತ ನಡೆಸುತ್ತಿದೆ. ನಯಾಪೈಸೆ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಭೀಕರ ಬರ ಇದೆ. ಸಿಎಂ ಸಿದ್ದರಾಮಯ್ಯ ನಾವು ಸಮರ್ಥವಾಗಿ ಬರ ಪರಿಹಾರ ನೀಡುತೇವೆ ಎಂದಿದ್ದರು. ಬರಗಾಲ ಆವರಿಸಿ ಮೂರು ತಿಂಗಳಾಯಿತು. ಮುಂಗಾರು ಬೆಳೆ ನಾಶವಾಗಿ ರೈತರು ಕಂಗಾಲಾಗಿದ್ದಾರೆ. ಇಷ್ಟಾದರೂ ರಾಜ್ಯ ಸರ್ಕಾರ ಈವರೆಗೆ ನಯಾಪೈಸೆ ಬಿಡುಗಡೆ ಮಾಡಿಲ್ಲ. ಬರಿ ಹೇಳಿಕೆ ನೀಡುತ್ತಾ ಕಾಲ ಕಳೆಯುತ್ತಿದ್ದಾರೆ. ಈ ಸರ್ಕಾರ ರೈತರ ಪಾಲಿಗೆ ಜೀವಂತವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರ ಇದೆಯೋ ಇಲ್ಲವೋ ಎಂಬುದು ಇಂತಹ ಸಂಕಷ್ಟದ ಸ್ಥಿತಿಯಲ್ಲಿ ಗೊತ್ತಾಗುತದೆ. ರೈತರ ಪಾಲಿಗಂತು ಸರ್ಕಾರ ಇಲ್ಲ ಎಂಬುದು ಸ್ಪಷ್ಟ ಎಂದು ಹೇಳಿದರು.

ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗಿ ಹಲವು ದಿನ ಕಳೆದಿದೆ. ಆದರೂ ಕ್ರಮ ಕೈಗೊಂಡಿಲ್ಲ. ಕಾಂಗ್ರೆಸ್ ಸರ್ಕಾರ ಆರಂಭದಿಂದಲೂ ಎಡವಟ್ಟುಗಳನ್ನೇ ಮಾಡುತ್ತಾ ಬಂದಿದೆ. ಸರ್ಕಾರದ ಬಳಿ ಇರುವ ವಿಕೋಪ ನಿಧಿ ಬಿಡುಗಡೆ ಮಾಡಲಿ ನಂತರ ಕೇಂದ್ರದಿಂದ ಹಣ ಪಡೆಯಲಿ ಎಂದು ಒತ್ತಾಯಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular