HomeKarnatakaಶಾಲೆಗಳಲ್ಲಿ ಹಿಜಾಬ್ ಗೆ ಅವಕಾಶ: ಧರ್ಮದ ಆಧಾರದಲ್ಲಿ ಮಕ್ಕಳಲ್ಲಿ ಬೇಧ ಭಾವ ಸೃಷ್ಟಿಸಲು ಸರ್ಕಾರವೇ ಮುಂದಾಗಿರುವುದು...

ಶಾಲೆಗಳಲ್ಲಿ ಹಿಜಾಬ್ ಗೆ ಅವಕಾಶ: ಧರ್ಮದ ಆಧಾರದಲ್ಲಿ ಮಕ್ಕಳಲ್ಲಿ ಬೇಧ ಭಾವ ಸೃಷ್ಟಿಸಲು ಸರ್ಕಾರವೇ ಮುಂದಾಗಿರುವುದು ಖಂಡನೀಯ: ಸಂಸದ ಬೊಮ್ಮಾಯಿ ಆಕ್ರೋಶ

ಬೆಂಗಳೂರು: ಶಾಲಾ ಸಮವಸ್ತ್ರ ವಿಚಾರವಾಗಿ ಹಿಜಾಬ್ ಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅವಕಾಶ ನೀಡಿರುವುದಕ್ಕೆ ಮಾಜಿ ಸಿಎಂ, ಬಿಜೆಪಿ ಸಂಸದ ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದಾರೆ.

ರಾಜ್ಯ ಸರ್ಕಾರ ಯಾವುದೇ ಬೇಡಿಕೆ ಇಲ್ಲದಿದ್ದರೂ ಕೂಡ ಅತ್ಯಂತ ಶಾಂತಿ ಸುವ್ಯವಸ್ಥೆಯಿಂದ ಶಿಕ್ಷಣ ವ್ಯವಸ್ಥೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಕಲ್ಪಿಸಿ ಧರ್ಮದ ಆಧಾರದಲ್ಲಿ ಮಕ್ಕಳಲ್ಲಿ ಬೇಧ ಭಾವ ಹುಟ್ಟುವ ತುಷ್ಟೀಕರಣಕ್ಕಾಗಿ ಈ ಆಜ್ಞೆಯನ್ನು ಮಾಡಿದೆ. ಇದನ್ನು ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಆಗುವ ಆತಂಕ , ಭೆಧ ಭಾವಕ್ಕೆ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, 1980 ರ ಶಾಲಾ ಸಮವಸ್ತ್ರ ಕಾನೂನು ಅಡಿಯಲ್ಲಿ ನಾವು ಆ ಸ್ಪಷ್ಟೀಕರಣದ ಆದೇಶವನ್ನು ಮಾಡಿದ್ದೇವು. ಅದನ್ನು ಹೈಕೋರ್ಟ್ ಕೂಡ ಎತ್ತಿ ಹಿಡಿದಿತ್ತು. ಸುಪ್ರೀಂ ಕೋರ್ಟ್ ನಲ್ಲಿಯೂ ಅದು ವಿಭಜಿತ ತೀರ್ಪು ಆಗಿತ್ತು. ಈ ಪ್ರಕರಣ ಇನ್ನೂ ಸುಪ್ರೀಂ ಕೋರ್ಟ್ ನಲ್ಲಿ ಇರುವಾಗಲೇ ಮಕ್ಕಳಲ್ಲಿ ಮತ್ತೆ ಬೇಧ ಭಾವದ ಆತಂಕವನ್ನು ಮೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜ್ಯ ಸರ್ಕಾರ ಶಿಕ್ಷಣ ವ್ಯವಸ್ಥೆಯನ್ನು ಸಂಪೂರ್ಣವಾಗಿ ಹದಗೆಡಿಸಿದೆ. ಯಾವುದೇ ಸ್ಪಷ್ಟವಾದ ನೀತಿ ಇಲ್ಲ. ಯಾವುದೇ ವಿದ್ಯಾರ್ಜನೆ ಆಗುತ್ತಿಲ್ಲ. ಶಿಕ್ಷಕರ ಕೊರತೆ ಇದೆ. ಇಂತಹದನ್ನು ಮುಚ್ಚಿಕೊಳ್ಳಲು ಇಂತಹ ಆದೇಶ ಮಾಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಮಾಡಲು ಬೇಕಾದಷ್ಟು ಕೆಲಸ ಇದೆ. ಅದನ್ನು ಬಿಟ್ಟು ಈ ರೀತಿಯ ಆದೇಶ ಮಾಡಿದ್ದಾರೆ. ಯಾತಕ್ಕಾಗಿ ಇದನ್ನು ತಂದಿದ್ದಾರೆ. ಎನ್ನುವ ಪ್ರಶ್ನೆಗೆ ಉತ್ತರ ಹೇಳಬೇಕು. ಈಗ ಏಕಾಏಕಿ ಮಾಡಿರುವುದು ತುಷ್ಟೀಕರಣದ ರಾಜಕಾರಣ ಬಿಟ್ಟರೇ ಮತ್ತೇನೂ ಇದರಲ್ಲಿ ಕಾಣುತ್ತಿಲ್ಲ ಎಂದು ಹೇಳಿದ್ದಾರೆ.

ಹಿಜಾಬ್ ವಿಚಾರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿಯೇ ಸೌದಿ ಅರೇಬಿಯಾ, ಇರಾನ್ ಸೇರಿದಂತೆ ಇತರ ದೇಶದಲ್ಲಿ ಹೆಣ್ಣು ಮಕ್ಕಳು ಹಿಜಾಬ್ ತೊರೆದು ತಮ್ಮ ನಿತ್ಯ ಜೀವನ ನಡೆಸುತ್ತಿರುವ ಈ ಸಂದರ್ಭದಲ್ಲಿ ರಾಜ್ಯದಲ್ಲಿ ಮಾತ್ರ ಹೆಣ್ಣುಮಕ್ಕಳಿಗೆ ಹಿಂದುಳಿಕೆಯ ವಿಚಾರ ಇಟ್ಟುಕೊಂಡು ಕಾನೂನು ಮಾಡಿರುವುದು ಸೂಕ್ತ ಅಲ್ಲ ಇದನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಆಗುವ ಆತಂಕ ಭೆಧಭಾವಕ್ಕೆ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ ಎಂದಿದ್ದಾರೆ.

ಕಾನೂನು ರೀತಿಯಲ್ಲಿ ರಾಜ್ಯ ಸರ್ಕಾರವೇ ವಿವಾದ ಹುಟ್ಟು ಹಾಕಿದೆ. ಇದು ನಾಗರಿಕ ಸರ್ಕಾರಕ್ಕೆ ಶೋಭೆ ತರುವುದಿಲ್ಲ. ಇದು ಜವಾಬ್ದಾರಿಯಲ್ಲ. ಅತ್ಯಂತ ಬೇಜವಾಬ್ದಾರಿಯ ನಿರ್ಣಯ ಎಂದು ವಾಗ್ದಾಳಿ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular