HomeKarnatakaBIG NEWS: ಸುರ್ಜೇವಾಲಾ ಹೇಳಿಕೆ ಮತದಾರರಿಗೆ ಮಾಡಿದ ಅವಮಾನ; ಕಾಂಗ್ರೆಸ್ ನವರೇನು ತೊಳೆದ ಮುತ್ತಾ? ಮಾಜಿ...

BIG NEWS: ಸುರ್ಜೇವಾಲಾ ಹೇಳಿಕೆ ಮತದಾರರಿಗೆ ಮಾಡಿದ ಅವಮಾನ; ಕಾಂಗ್ರೆಸ್ ನವರೇನು ತೊಳೆದ ಮುತ್ತಾ? ಮಾಜಿ ಸಿಎಂ ಬೊಮ್ಮಾಯಿ ಆಕ್ರೋಶ

ಬೆಂಗಳೂರು: ಬಿಜೆಪಿಗೆ ಮತಹಾಕಿದವರು ರಾಕ್ಷಸರು ಎಂಬ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಹೇಳಿಕೆಗೆ ಕಿಡಿಕಾರಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಸುರ್ಜೇವಾಲಾ ಹೇಳಿಕೆ ಖಂಡನೀಯ. ಇದು ಮತದಾರರಿಗೆ ಮಾಡಿದ ಅವಮಾನ ಎಂದು ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ಸುರ್ಜೇವಾಲ ಆಡಿದ ಮಾತುಗಳು ಭಾರತೀಯ ನಾಗರಿಕರಿಗೆ ಮಾಡಿದ ಅಪಮಾನ. ಬಿಜೆಪಿ ವಿರುದ್ಧ ಮಾತನಾಡಲು ಕಾಂಗ್ರೆಸ್ ನವರೇನು ತೊಳೆದ ಮುತ್ತಾ? ಎಷ್ಟು ಜನ ಕಾಂಗ್ರೆಸ್ ನಾಯಕರು ಜೈಲಿನಲ್ಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ರಾಜಕೀಯ ಪ್ರೇರಿತ ತನಿಖೆ ನಡೆಯುತ್ತಿದೆ. ಯಾವುದೇ ದಾಖಲೆ ಸಿಗದಿರುವ ಕಾರಣಕ್ಕೆ ಅನಗತ್ಯ ಆರೋಪ ಮಾಡಲು ಬಿಜೆಪಿ ವಿರುದ್ಧ ತನಿಖೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ನವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಗುಡುಗಿದರು.

For Latest News Updates, Join Our Whatsapp Community🚩
RELATED ARTICLES

Most Popular