HomeKarnatakaBREAKING : ಆಗಸ್ಟ್ 14 ರಂದು ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

BREAKING : ಆಗಸ್ಟ್ 14 ರಂದು ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಆಗಸ್ಟ್ 14ರಂದು ಬಸವರಾಜ ಹೊರಟ್ಟಿ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೂಚನೆ ಹಾಗೂ ಕಾಂಗ್ರೆಸ್ ಹೈಕಮಾಂಡ್ನ ನಿರ್ಧಾರದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆಯುತ್ತಿದೆ ಎನ್ನಲಾಗಿದೆ. ಕಾಂಗ್ರೆಸ್ ಈಗಾಗಲೇ ಸಭಾಪತಿ ಸ್ಥಾನಕ್ಕೆ ಸಲೀಂ ಅಹ್ಮದ್ ಅವರ ಹೆಸರನ್ನು ಅಂತಿಮಗೊಳಿಸಿದ್ದು, ಇದಾದ ಬಳಿಕ ರಾಜಕೀಯ ಚಟುವಟಿಕೆಗಳು ವೇಗ ಪಡೆದಿವೆ.

ಡಿ.ಕೆ. ಶಿವಕುಮಾರ್ ದೂರವಾಣಿ ಕರೆ ಮಾಡಿ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿ ಸಹಕರಿಸುವಂತೆ ಮನವಿ ಮಾಡಿದ್ದರು ಎಂದು ಬಸವರಾಜ ಹೊರಟ್ಟಿ ಈ ಹಿಂದೆ ಬಹಿರಂಗಪಡಿಸಿದ್ದರು. ಆದರೆ, ತಕ್ಷಣ ರಾಜೀನಾಮೆ ನೀಡದೇ ಬಿಜೆಪಿ ಹಾಗೂ ಜೆಡಿಎಸ್ ನಾಯಕರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಅವರು ತಿಳಿಸಿದ್ದರು. ಈ ನಡುವೆ ಆಗಸ್ಟ್ 14ರಂದು ಹೊರಟ್ಟಿ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

‘ಸಿಎಂ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡುವಂತೆ ಹೇಳಿದರು.. ಮನಸ್ಸಿಗೆ ತುಂಬಾ ನೋವಾಗಿದೆ’ ಎಂದ ಸಭಾಪತಿ ಬಸವರಾಜ ಹೊರಟ್ಟಿ

ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ನಿಂದ ಸಲೀಂ ಅಹ್ಮದ್ ಅವರ ಹೆಸರನ್ನು ಘೋಷಿಸಿದ ಬೆನ್ನಲ್ಲೇ ರಾಜಕೀಯ ಬೆಳವಣಿಗೆಗಳು ತೀವ್ರಗೊಂಡಿವೆ. ಈ ನಡುವೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೂರವಾಣಿ ಕರೆ ಮಾಡಿ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚನೆ ನೀಡಿದರು ಎಂದು ಹಾಲಿ ಸಭಾಪತಿ ಬಸವರಾಜ ಹೊರಟ್ಟಿ ಬಹಿರಂಗಪಡಿಸಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಬಸವರಾಜ ಹೊರಟ್ಟಿ ಮಾಧ್ಯಮಗಳೊಂದಿಗೆ ಮಾತನಾಡಿ, “ಸಿಎಂ ಡಿ.ಕೆ. ಶಿವಕುಮಾರ್ ಕರೆ ಮಾಡಿ ಪಕ್ಷದ ಹೈಕಮಾಂಡ್ ನಿರ್ಧಾರವಾಗಿದೆ, ರಾಜೀನಾಮೆ ನೀಡಿ ಎಂದು ಹೇಳಿದರು. ಈ ಬೆಳವಣಿಗೆಯಿಂದ ನನಗೆ ತುಂಬಾ ನೋವಾಗಿದೆ. ಇದು ಕಲುಷಿತ ರಾಜಕಾರಣದಂತಿದೆ” ಎಂದು ಬೇಸರ ವ್ಯಕ್ತಪಡಿಸಿದರು.”ಸಭಾಪತಿ ಸ್ಥಾನವು ಸಂವಿಧಾನಬದ್ಧ ಹುದ್ದೆ. ಈ ಹಿಂದೆ ಇಂತಹ ಘಟನೆ ನಡೆದಿರಲಿಲ್ಲ. ನನಗೆ ನೋಟಿಸ್ ನೀಡಿದರೆ ಸೂಕ್ತ ಉತ್ತರ ನೀಡುತ್ತೇನೆ. ಯಾವ ಕಾರಣಕ್ಕೆ ರಾಜೀನಾಮೆ ಕೇಳುತ್ತಿದ್ದಾರೆ ಎಂಬುದೇ ಮುಖ್ಯ” ಎಂದು ಅವರು ಹೇಳಿದರು.

ಇನ್ನೂ ರಾಜೀನಾಮೆ ನೀಡುವ ಬಗ್ಗೆ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದ ಹೊರಟ್ಟಿ, ಪ್ರತಿಪಕ್ಷ ನಾಯಕ ಆರ್. ಅಶೋಕ್ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು. “ನನ್ನ ಅವಧಿ ಇನ್ನೂ ಬಾಕಿಯಿದೆ. ಸದ್ಯಕ್ಕೆ ರಾಜೀನಾಮೆ ನೀಡುವುದಿಲ್ಲ” ಎಂದು ಅವರು ಹೇಳಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular