HomeLive Newsಸಭಾಪತಿ ಹೊರಟ್ಟಿ ರಾಜೀನಾಮೆ ಸ್ವೀಕರಿಸದಂತೆ ರಾಜ್ಯಪಾಲರಿಗೆ ಬಿಜೆಪಿ-ಜೆಡಿಎಸ್ ನಿಯೋಗ ಮನವಿ

ಸಭಾಪತಿ ಹೊರಟ್ಟಿ ರಾಜೀನಾಮೆ ಸ್ವೀಕರಿಸದಂತೆ ರಾಜ್ಯಪಾಲರಿಗೆ ಬಿಜೆಪಿ-ಜೆಡಿಎಸ್ ನಿಯೋಗ ಮನವಿ

ಬೆಂಗಳೂರು: ಸಭಾಪತಿ ಬಸವರಾಜ್ ಹೊರಟ್ಟಿ ರಾಜೀನಾಮೆ ಅಂಗೀಕರಿಸದಂತೆ ಬಿಜೆಪಿ-ಜೆಡಿಎಸ್ ನಿಯೋಗ ರಾಜ್ಯಪಾಲರಿಗೆ ಮನವಿ ಮಾಡಿದೆ.

ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಕೊಡಿಸಲಾಗಿದೆ. ಹೊರಟ್ಟಿ ರಾಜೀನಾಮೆಯನ್ನು ಅಂಗೀಕರಸಬಾರದು ಎಂದು ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು ಸಲ್ಲಿಸಿದೆ.

ಛಲವಾದಿ ನಾರಾಯಣಸ್ವಾಮಿ, ಶರವಣ ನೇತೃತ್ವದಲ್ಲಿ ಲೋಕಭವನಕ್ಕೆ ತೆರಳಿದ ಬಿಜೆಪಿ-ಜೆಡಿಎಸ್ ನಿಯೋಗ, ಹೊರಟ್ಟಿ ಅವರ ರಾಜೀನಾಮೆ ಅಂಗೀಕರಿಸದಂತೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದನ ನಡಾವಳಿ ಪ್ರಕಾರ ರಾಜೀನಾಮೆ ಸಲ್ಲಿಕೆ ಆಗಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದೇ ವೇಳೆ ಕಾಂಗ್ರೆಸ್ ಲೆಟರ್‌ಹೆಡ್‌ನಲ್ಲಿ ಸಭಾಧ್ಯಕ್ಷ, ಸಭಾಪತಿಗಳ ಹೆಸರುಗಳ ಆಯ್ಕೆ ಬಗ್ಗೆಯೂ ರಾಜ್ಯಪಾಲರಿಗೆ ನಿಯೋಗ ದೂರು ಕೊಟ್ಟಿದೆ.

ಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಬಿ.ಕೆ.ಹರಿಪ್ರಸಾದ್ ನೇತೃತ್ವದಲ್ಲಿ ತಮ್ಮ ಕೊಠಡಿಗೆ ಬಂದಿದ್ದ ನಾಯಕರು, ಇವತ್ತೇ ರಾಜೀನಾಮೆ ಕೊಡಬೇಕೆಂದು ಒತ್ತಡ ಹಾಕಿ ರಾಜೀನಾಮೆ ಪಡೆದರು ಎಂದು ರಾಜ್ಯಪಾಲರಿಗೆ ಪತ್ರ ಬೆರೆದು ಬಸವರಾಜ ಹೊರಟ್ಟಿ ಅವರು ಆಗಸ್ಟ್ 7 ರಂದು ವಿವರಣೆ ಕೊಟ್ಟಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular