HomeKarnatakaಕೆಪಿಎಸ್ ಸಿ ಹಗರಣ: ಬಸವರಾಜ್ ಕನ್ನಾಳೆ ಇಡಿ ಕಸ್ಟಡಿಗೆ

ಕೆಪಿಎಸ್ ಸಿ ಹಗರಣ: ಬಸವರಾಜ್ ಕನ್ನಾಳೆ ಇಡಿ ಕಸ್ಟಡಿಗೆ

ಬೆಂಗಳೂರು: ಕೆಪಿಎಸ್ ಸಿಯಿಂದ ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದ ಹಗರಣದ ಪ್ರಮುಖ ಆರೋಪಿ ಬಸವರಾಜ ಕನ್ನಾಳೆಯನ್ನು ಇಡಿ ಅಧಿಕಾರಿಗಳ ವಶಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

ಬೆಂಗಳೂರಿನ 4ನೇ ಸಿಸಿಹೆಚ್ ಕೋರ್ಟ್ ಬಸವರಾಜ್ ಕನ್ನಳೆಯನ್ನು 14 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಆದೇಶಿಸಿದೆ. ಇಂದು ಬಸವರಾಜ ಕನ್ನಾಳೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಇಡಿ ಅಧಿಕಾರಿಗಳು, ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ನೀಡುವಂತೆ ಮನವಿ ಮಾಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಡಿ ಅಧಿಕಾರಿಗಳ ವಾದ ಪುರಸ್ಕರಿಸಿದ ಬೆಂಗಳೂರಿನ 4ನೇ ಸಿಸಿಹೆಚ್ ಕೋರ್ಟ್, ಕನ್ನಾಳೆಯನ್ನು 14 ದಿನ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ಆರೋಪಿ ಬಸವರಾಜ್ ಕನ್ನಾಳೆ ತನ್ನ ಡೈರಿಯಲ್ಲಿ ಬರೆದಿಟ್ಟಿದ್ದ ಹಣದ ವ್ಯವಹಾರದ ಮಾಹಿತಿ ಇಡಿ ತನಿಖೆ ವೇಳೆ ಬಯಲಾಗಿದೆ. ಎಂಟು ಅಭ್ಯರ್ಥಿಗಳಿಂದ ಬರಬೇಕಿದ್ದ ಹಣದ ಬಗ್ಗೆ ಡೈರಿಯಲ್ಲಿ ಕನ್ನಾಳೆ ಉಲ್ಲೇಖಿಸಿದ್ದಾನೆ. ಮಂಜುನಾಥ್, ಪೂಜಾ, ಅಶ್ವಿನಿ ಕುಮಾರ್, ಮೋಹನ್ ಕುಮಾರ್, ಸಂಗಮೇಶ್, ಪದ್ಮಾವತಿ ಮತ್ತು ಹರೀಶ್ ಸೇರಿದಂತೆ ಹಲವರ ಹೆಸರುಗಳನ್ನು ಡೈರಿಯಲ್ಲಿ ನಮೂದಿಸಿರುವುದು ಪತ್ತೆಯಾಗಿದೆ. ಅಲ್ಲದೇ ಅವರಿಂದ ತಲಾ 10 ಲಕ್ಷ ರೂ. ಹಾಗೂ ಮೋಹನ್ ಕುಮಾರ್ ಅವರಿಂದ 5 ಲಕ್ಷ ರೂ. ಬಾಕಿ ಬರಬೇಕೆಂದು ಡೈರಿಯಲ್ಲಿ ದಾಖಲಿಸಿದ್ದಾನೆ. 20ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ತರಬೇತಿ ನೀಡಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಮೂರು ವಿಲ್ಲಾಗಳನ್ನು ಬುಕ್ ಮಾಡಿದ್ದ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ.

ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮದಲ್ಲಿ ಅಭ್ಯರ್ಥಿಗಳಿಂದ ಬಸವರಾಜ್ ಕನ್ನಾಳೆ 1.5 ಕೋಟಿ ರೂ. ಸಂಗ್ರಹ ಮಾಡಿದ್ದರು. ಆ ಹಣದ ಪೈಕಿ, 1.3 ಕೋಟಿಯನ್ನು ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರಿಗೆ ನೀಡಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇನ್ನಷ್ಟು ವಿಚಾರಣೆಗೆ ಒಳಪಡಿಸುವ ನಿಟ್ಟಿನಲ್ಲಿ ಕನ್ನಾಳೆಯನ್ನು ಕಸ್ಟಡಿಗೆ ಪಡೆದಿದ್ದಾರೆ.

ಶಿವಶಂಕರಪ್ಪ ಸಾಹುಕಾರ್‌ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು

ಕೆಪಿಎಸ್‌ಸಿ ಅಕ್ರಮದ ಬೆನ್ನಲ್ಲೇ ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇದೀಗ ಮತ್ತೊಂದು ಸಂಕಷ್ಟ ಶುರುವಾಗಿದ್ದು, ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಶಿವಶಂಕರಪ್ಪ ಸಾಹುಕಾರ್ ಹಾಗೂ ಅವರ ಅಳಿಯನ ವಿರುದ್ಧ ಭೂಕಬಳಿಕೆ ಮಾಡಿದ ಆರೋಪ ಕೇಳಿಬಂದಿದ್ದು, ವಿಶ್ವನಾಥ್ ಪಾಟೀಲ್ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಯಾದಗಿರಿ ಜಿಲ್ಲೆಯ ಶಹಾಪುರ್ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ದೂರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಶಹಾಪುರ ತಾಲೂಕಿನ ಅಣಬಿ ಗ್ರಾಮದಲ್ಲಿ 10 ಎಕರೆ 20 ಗುಂಟೆ ಜಮೀನು ಕಬಳಿಕೆ ಮಾಡಲಾಗಿದೆ. ನನ್ನ ಮಲತಾಯಿ ಬಸಮ್ಮಗೌಡತಿಗೆ ಮಕ್ಕಳಿರಲಿಲ್ಲ. ಆದರೆ ಶಿವಶಂಕರಪ್ಪ ಸಾಹುಕಾರ್ ಅಳಿಯನಾದ ಶಂಕರಗೌಡನನ್ನು ಮಗ ಎಂದು ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಕೆ ಮಾಡಿದ್ದಾರೆ ಎಂದು ಆರೊಪಿಸಲಾಗಿದೆ.

ಜಮೀನು ಕಬಳಿಕೆ ಬಳಿಕ ಅಳಿಯನಿಂದ ತನ್ನ ಹೆಸರಿಗೆ ಜಮೀನು ಮಾಡಿಕೊಂಡಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಶಂಕರಪ್ಪ ಸಾಹುಕಾರ್ ಹಾಗೂ ಅವರ ಅಳಿಯನ ವಿರುದ್ಧ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular