HomeKarnatakaಗ್ಯಾರಂಟಿಗಳಿಂದ ಆರ್ಥಿಕ ಹೊರೆ: ಯೋಜನೆ ಸುಧಾರಣೆ ಅಗತ್ಯ: ಸಿಎಂ ಆರ್ಥಿಕ ಸಲಹೆಗಾರರಿಂದಲೇ ಮಹತ್ವದ ಹೇಳಿಕೆ

ಗ್ಯಾರಂಟಿಗಳಿಂದ ಆರ್ಥಿಕ ಹೊರೆ: ಯೋಜನೆ ಸುಧಾರಣೆ ಅಗತ್ಯ: ಸಿಎಂ ಆರ್ಥಿಕ ಸಲಹೆಗಾರರಿಂದಲೇ ಮಹತ್ವದ ಹೇಳಿಕೆ

ಕೊಪ್ಪಳ: ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಭಾರ ಸಹಜವಾಗಿಯೇ ಹೆಚ್ಚಾಗಿದೆ. ಹೀಗಾಗಿ ಯೋಜನೆಗಳಲ್ಲಿ ಸುಧಾರಣೆ ಅಗತ್ಯವಾಗಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಾರು 58,000 ಕೋಟಿ ರೂಪಾಯಿ ವೆಚ್ಚದ 5 ಗ್ಯಾರಂಟಿ ಯೋಜನೆಗಳನ್ನು ಸಡನ್ ಆಗಿ ಜಾರಿ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಡವರ ಬಗ್ಗೆ ಅಪಾರ ಕಾಳಜಿ ಇರುವುದರಿಂದ ಜನಪರ ಯೋಜನೆ ಜಾರಿಗೊಳಿಸಿದ್ದಾರೆ. ಜನರ ಹಿತಕ್ಕಾಗಿ ಗ್ಯಾರಂಟಿ ಯೋಜನೆ ಜಾರಿ ಮಾಡಲಾಗಿದ್ದು, ಆಗಿರುವ ಆರ್ಥಿಕ ಹೊರೆ ನಿಭಾಯಿಸಬೇಕಿದೆ. ಹೊರೆ ತಗ್ಗಿಸುವ ನಿಟ್ಟಿನಲ್ಲಿ ಏನು ಸುಧಾರಣೆ ಮಾಡಬೇಕು ಎಂಬುದರ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜನರ ಮೇಲಿನ ತೆರಿಗೆ ಹೆಚ್ಚಳ ಮಾಡುವುದು ಕಷ್ಟ. ಇದರ ಹೊರತಾಗಿ ಆದಾಯಕ್ಕಾಗಿ ಚಿಂತನೆ ನಡೆದಿದೆ. ನಗರ ಯೋಜನೆ ವ್ಯಾಪ್ತಿಯ ಲೇಔಟ್ ಗಳ ಸಕ್ರಮ ಸೇರಿ ಹಲವು ರೀತಿಯಲ್ಲಿ ಆದಾಯ ಹೆಚ್ಚಳಕ್ಕೆ ಚಿಂತನೆ ನಡೆದಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular