HomeKarnatakaಮುಂದಿನ 4 ವರ್ಷ ಸಿದ್ದರಾಮಯ್ಯ ಸಿಎಂ ಆಗಿರಬೇಕು, ಅದಕ್ಕಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಬೇಕು: ರಾಯರೆಡ್ಡಿ

ಮುಂದಿನ 4 ವರ್ಷ ಸಿದ್ದರಾಮಯ್ಯ ಸಿಎಂ ಆಗಿರಬೇಕು, ಅದಕ್ಕಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಬೇಕು: ರಾಯರೆಡ್ಡಿ

ಕೊಪ್ಪಳ: ಮುಂದಿನ 4 ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರಬೇಕು. ಅದಕ್ಕಾಗಿ ಕೊಪ್ಪಳ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

ಕೊಪ್ಪಳದಲ್ಲಿ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರಬೇಕು. ಅದಕ್ಕಾಗಿ ಕೊಪ್ಪಳ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ್ ಅವರನ್ನು ಗೆಲ್ಲಿಸಬೇಕು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಚಿವರಾಗುವ ಆಸೆಯಿಂದ ಕಾಂಗ್ರೆಸ್ ಅಭ್ಯರ್ಥಿಯನ್ನು ರಾಯರೆಡ್ಡಿ ಅವರೇ ಸೋಲಿಸುತ್ತಾರೆ ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ. ನಾನು ನಮ್ಮ ಪಕ್ಷದ ಅಭ್ಯರ್ಥಿಯನ್ನೇ ಸೋಲಿಸುವಷ್ಟು ಕೆಳಮಟ್ಟಕ್ಕೆ ಇಳಿಯುವುದಿಲ್ಲ. ಅಭ್ಯರ್ಥಿ ಯಾರೇ ಆಗಲಿ, ಕ್ಷೇತ್ರ ಯಾವುದೇ ಆಗಲಿ ಕಾಂಗ್ರೆಸ್ ಪಕ್ಷ ಗೆಲ್ಲಬೇಕು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular