BIG NEWS: ಕರ್ನಾಟಕದಲ್ಲಿ ಭ್ರಷ್ಟಾಚಾರ ಬ್ರ್ಯಾಂಡ್ ಆಗಿದೆ; ವಿಪಕ್ಷದವರನ್ನೂ ಸಿಎಂ ವಿಶ್ವಾಸಕ್ಕೆ ತೆಗೆದುಕೊಳ್ಳಲಿ ಎಂದ ಕಾಂಗ್ರೆಸ್ ಶಾಸಕ

ಕೊಪ್ಪಳ: ನಾವು ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದೆವು. ಈಗ ಕಾಂಗ್ರೆಸ್ ವಿರುದ್ಧ ಅವರು 15% ಕಮಿಷನ್ ಆರೋಪ ಮಾಡುತ್ತಿದ್ದಾರೆ. ಕರ್ನಾಟಕ ಭ್ರಷ್ಟಾಚಾರದ ಬ್ರ್ಯಾಂಡ್ ಆಗಿದೆ. ರಾಷ್ಟ್ರ ಮಟ್ಟದಲ್ಲಿ ಮಾನ ಮರ್ಯಾದೆ ಹಾಳಾಗುತ್ತಿದೆ ಎಂದು ಶಾಸಕ ಬಸವರಾಜ್ ರಾಯರೆಡ್ಡಿ ಕಿಡಿಕಾರಿದ್ದಾರೆ.

ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ್ ರಾಯರೆಡ್ಡಿ, ಕರ್ನಾಟಕ ಭ್ರಷ್ಟ ರಾಜ್ಯವಾಗುತ್ತಿದೆ. ಭ್ರಷ್ಟಾಚಾರ ಬ್ರ್ಯಾಂಡ್ ಆಗಿದೆ. ವಿಪಕ್ಷದವರು ನಮ್ಮ ಮೇಲೆ, ನಾವು ಅವರ ಮೇಲೆ ಆರೋಪ ಮಾಡುತ್ತಿದ್ದೇವೆ. ಭ್ರಷ್ಟಾಚಾರದ ವಿಚಾರವಾಗಿ ನನಗೆ ನೋವು ಆಗುತ್ತಿದೆ. ಭ್ರಷ್ಟಾಚಾರ ತೊಲಗಿಸುವ ನಿಟ್ಟಿನಲ್ಲಿ ಸಿಎಂ ಕೆಲಸ ಮಾಡಬೇಕು ಎಂದು ಹೇಳಿದರು.

ಸಿಎಂ ವಿರೋಧ ಪಕ್ಷದವರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಿ. ಸಭೆ ಕರೆದು ಅವರ ಅಭಿಪ್ರಾಯಗಳೇನು ಎಂದು ಕೇಳಲಿ. ಭ್ರಷ್ಟಾಚಾರ ವಿಚಾರದಲ್ಲಿ ಕರ್ನಾಟಕದ ಹೆಸರು ದೇಶಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇದನ್ನು ಮೊದಲು ತಪ್ಪಿಸಬೇಕಿದೆ. ಆ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಮಾತುಕತೆ ನಡೆಸಿ ಕ್ರಮ ಕೈಗೊಳ್ಳಲಿ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read