
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ್ ರಾಯರೆಡ್ಡಿ, ಕರ್ನಾಟಕ ಭ್ರಷ್ಟ ರಾಜ್ಯವಾಗುತ್ತಿದೆ. ಭ್ರಷ್ಟಾಚಾರ ಬ್ರ್ಯಾಂಡ್ ಆಗಿದೆ. ವಿಪಕ್ಷದವರು ನಮ್ಮ ಮೇಲೆ, ನಾವು ಅವರ ಮೇಲೆ ಆರೋಪ ಮಾಡುತ್ತಿದ್ದೇವೆ. ಭ್ರಷ್ಟಾಚಾರದ ವಿಚಾರವಾಗಿ ನನಗೆ ನೋವು ಆಗುತ್ತಿದೆ. ಭ್ರಷ್ಟಾಚಾರ ತೊಲಗಿಸುವ ನಿಟ್ಟಿನಲ್ಲಿ ಸಿಎಂ ಕೆಲಸ ಮಾಡಬೇಕು ಎಂದು ಹೇಳಿದರು.
ಸಿಎಂ ವಿರೋಧ ಪಕ್ಷದವರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಿ. ಸಭೆ ಕರೆದು ಅವರ ಅಭಿಪ್ರಾಯಗಳೇನು ಎಂದು ಕೇಳಲಿ. ಭ್ರಷ್ಟಾಚಾರ ವಿಚಾರದಲ್ಲಿ ಕರ್ನಾಟಕದ ಹೆಸರು ದೇಶಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇದನ್ನು ಮೊದಲು ತಪ್ಪಿಸಬೇಕಿದೆ. ಆ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಮಾತುಕತೆ ನಡೆಸಿ ಕ್ರಮ ಕೈಗೊಳ್ಳಲಿ ಎಂದು ಹೇಳಿದ್ದಾರೆ.

